ಬೆಂಗಳೂರು ಗ್ರಾಮಾಂತರ

ಹಳ್ಳಕ್ಕೆ ಕಾರು ಬಿದ್ದು ಮೂವರಿಗೆ ಗಾಯ

Published On :

ಭಾರತೀನಗರ: ಮಾರುತಿ ಸ್ವಿಪ್ಟ್ ಕಾರೊಂದು ಆಯತಪ್ಪಿ ಹಳ್ಳಕ್ಕೆ ಬಿದ್ದು 3 ಮಂದಿ ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ಹನುಮಂತನಗರದ ತಿರುವಿನಲ್ಲಿ ನಡೆದಿದೆ. ಮಂಡ್ಯ ತಾಲೂಕಿನ ರಾಜಶೆಟ್ಟಿಪುರ ಗ್ರಾಮದ ಬೆಂಗಳೂರಿನಲ್ಲಿ ವಾಸವಾಗಿರುವ ಕೆ.ನಾಗರಾಜು ಬಿನ್ ಕರಿಯಪ್ಪ, ರಾಜು ಬಿನ್ ಶಿವಣ್ಣ, ರವಿ ಗಾಯಗೊಂಡವರು. ಆತ್ಮಲಿಂಗೇಶ್ವರ ದೇವಸ್ಥಾನದಲ್ಲಿ ಮದುವೆಗೆಂದು ಬಂದಿದ್ದ ಇವರು, ಸೋಮವಾರ ರಾತ್ರಿ ವಾಪಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಾಲಕ ಮದ್ಯಪಾನ ಮಾಡಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಮೂವರು ಗಾಯಾಳುಗಳನ್ನು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.