ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ: 11 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ

Published On :

ದೇವನಹಳ್ಳಿ: ಮಾ.28ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ತಾಲೂಕಿನ 11 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲ್ಲಿಯೂ ಪರೀಕ್ಷೆ ನಡೆಯಲಿದೆ. ಒಟ್ಟು 3003
ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲಿದ್ದಾರೆ ಎಂದು ತಹಸೀಲ್ದಾರ್ ಕೇಶವಮೂರ್ತಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳು ನಡೆಯದಂತೆ  200 ಮೀಟರ್ ಸುತ್ತ-ಮುತ್ತ ನಿಷೇಧಾಜ್ಞೆ  ಹೊರಡಿಸಲಾಗಿದೆ ಎಂದು ತಿಳಿಸಿದರು. ದೇವನಹಳ್ಳಿ-2, ವಿಜಯಪುರ-4, ಆವತಿ, ವಿಶ್ವನಾಥಪುರ, ಬೂದಿಗೆರೆ, ಚನ್ನಹಳ್ಳಿ ಹಾಗೂ ಸಾದಹಳ್ಳಿ ಸೇರಿ ಒಟ್ಟು 11 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು ಪರೀಕ್ಷಾ ಕೇಂದ್ರಗಳ ಬಳಿಯ ಎಲ್ಲ ಝೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.ಮಾ.28 ರಂದು ಪ್ರಥಮ ಭಾಷೆ, ಏ.1 ರಂದು ಗಣಿತ, 3 ರಂದು ವಿಜ್ಞಾನ, 4 ರಂದು ತೃತೀಯ ಭಾಷೆ, 7ರಂದು ಸಮಾಜ ವಿಜ್ಞಾನ ಹಾಗೂ 9 ರಂದು ದ್ವಿತೀಯ ಭಾಷಾ ಪರೀಕ್ಷೆಗಳು ನಡೆಯಲಿವೆ ಎಂದು ಬಿಇಒ ಮುನಿರಾಜು ತಿಳಿಸಿದ್ದಾರೆ.
 ಪ್ರಶ್ನೆ ಪತ್ರಿಕೆ ಬಹಿರಂಗವಾಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.