ಬೆಂಗಳೂರು ಗ್ರಾಮಾಂತರ

ನೆಲಮಂಗಲ: 243 ಕೇಂದ್ರಗಳಲ್ಲಿ ಮತದಾನ

Published On :

ನೆಲಮಂಗಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸೇರಿರುವ ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 1 ಲಕ್ಷದ 85 ಸಾವಿರದ 790 ಮತದಾರರಿದ್ದು ಇವರ ಪೈಕಿ 94,300 ಪುರುಷ ಮತದಾರರು, 91,453  ಮಹಿಳಾ ಮತದಾರರು ಮತ ಚಲಾವಣೆ ಮಾಡಲಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಜಿ.ಪ್ರಭು ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಸಂಬಂಧ ಮಾಹಿತಿ ನೀಡಿದ ಅವರು, ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 243 ಮತ ಕೇಂದ್ರ ಸ್ಥಾಪಿಸಲಾಗಿದ್ದು, ಇವುಗಳ ಪೈಕಿ 45 ಅತೀ ಸೂಕ್ಷ್ಮ 101 ಸೂಕ್ಷ್ಮ ಇತರೆ 68 ಕೇಂದ್ರಗಳನ್ನು ಗುರುತಿಸಲಾಗಿದೆ.
ಚುನಾವಣಾ ನೀತಿ ಸಂಹಿತೆಯಲ್ಲಿ ಯಾವುದೇ ಪಕ್ಷವು ಮತದಾರರನ್ನು ಓಲೈಸಲು ಹಾಗೂ ಒತ್ತಡ ಏರದಂತೆ  ಚುನಾವಣಾ ಆಯೋಗದ ನಿರ್ದೇಶನದಂತೆ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಗ್ರಾಮಗಳಲ್ಲಿ ಪಾರಂಪರಿಕ ಕಾರ್ಯಕ್ರಮ ಹೊರತು ಪಡಿಸಿ ಯಾವುದೇ ಸಭೆ ಸಮಾರಂಭ ನಡೆಸಲು ಅನುಮತಿ ಪಡೆದು ಕರಪತ್ರ ಮುದ್ರಿಸಬೇಕು. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಿಕೊಳ್ಳಲಾಗಿದೆ.
 ಅವರಿಗೆ ಮಾ.30ರಂದು ಮೊದಲನೆ ತರಬೇತಿ ಏ.10ರಂದು 2ನೇ ತರಬೇತಿ ಕಾರ್ಯಾಗಾರ ನಡೆಸಿ ಚುನಾವಣೆ ನಡೆಸುವ ಸಂಕ್ಷಿಪ್ತ ಮಾಹಿತಿ ನೀಡಲಾಗುವುದು. ಕ್ಷೇತ್ರದಲ್ಲಿ ಅಧಿಕಾರಿಗಳು ಚುನಾವಣಾ ಕಾರ್ಯ ವೀಕ್ಷಿಸಲು ಕೇಂದ್ರ ಚುನಾವಣಾ ಆಯೋಗ ವೀಕ್ಷಕರು ವೀಕ್ಷಿಸುತ್ತಾರೆ. ಕ್ಷೇತ್ರದಲ್ಲಿ ರೌಡಿ ಪಟ್ಟಿಯಲ್ಲಿರುವವರನ್ನು ಈಗಾಗಲೇ ಕರೆಯಿಸಿ ವಿಚಾರಣೆ ನಡೆಸಿ ಚುನಾವಣೆ ಸಂದರ್ಭದಲ್ಲಿ ಶಾಂತಿ ಭಂಗ ತರದಂತೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.
ಮತದಾನ ಬಗ್ಗೆ ಈಗಾಗಲೇ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗಿದ್ದು, ಮತದಾರರನ್ನು ಪ್ರಚೋದಿಸುವ ಉಡುಗೊರೆ ಸೇರಿದಂತೆ ಯಾವುದೇ ರೀತಿಯ ವಸ್ತು ನೀಡುವುದಾಗಲಿ, ಆಮಿಷ ಒಡ್ಡುವುದಾಗಲಿ ಮಾಡಬಾರದು. ಮತದಾರರೂ ಸಹ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಂದ ಯಾವುದನ್ನು ಸ್ವೀಕರಿಸಬಾರದು. ಹಣ, ವಸ್ತು, ಮದ್ಯ ಯಾವುದೇ ರೀತಿಯ ಆಮಿಷಕ್ಕೆ ಒಳಗಾಗಿ ಯಾವುದೇ ವಸ್ತು ಪಡೆದಿದ್ದು ರುಜುವಾತು ಆದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಹಸೀಲ್ದಾರ್ ಡಾ.ಗೀತಾ ಎಚ್ಚರಿಸಿದರು.ದೂರು ಮತ್ತು ಸಲಹೆಗೆ ದೂ. 96116-56443, 2772-2125  ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.