ಸರ್ವೋದಯ ನೂತನ ಶಾಲಾ ಕಟ್ಟಡ ಉದ್ಘಾಟನೆ, ಮಕ್ಕಳ ಪರ್ವ ಕಾರ್ಯಕ್ರಮ ನಾಳೆ
ಮಾಗಡಿ: ಪಟ್ಟಣದ ಎನ್ಇಎಸ್ ಬಡಾವಣೆಯ ಸರ್ವೋದಯ ಆಂಗ್ಲ ಮಾಧ್ಯಮ ನೂತನ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ಮಕ್ಕಳ ಪರ್ವ ಕಾರ್ಯಕ್ರಮ ಮಾ.27 ರಂದು ಸಂಜೆ 4.30ಕ್ಕೆ
ಏರ್ಪಡಿಸಲಾಗಿದೆ ಎಂದು ಸಂಸ್ಥೆ ಕಾರ್ಯದರ್ಶಿ ಕೆಂಪಹೊನ್ನಯ್ಯ ತಿಳಿಸಿದ್ದಾರೆ.ಕೆಂಗೇರಿ ಉಪನಗರ ಏಕದಳ ಬಿಲ್ವ ಬಂಡೇಮಠದ ಸಚ್ಚಿದಾನಂದ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವಗಂಗೆ ಮೇಲಣಗವಿ ಮಠದ ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ ನೂತನ ಶಾಲಾ ಕಟ್ಟಡ ಉದ್ಘಾಟಿಸಲಿದ್ದಾರೆ. ಕನಕಪುರದ ಚಿಕ್ಕಕಬ್ಬಾಳು ಮಠದ ಅಧ್ಯಕ್ಷ ಶಿವಾನಂದ ಶಿವಚಾರ್ಯಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಗುಮ್ಮಸಂದ್ರದ ಮಠದ ಚಂದ್ರಶೇಖರ ಸ್ವಾಮೀಜಿ, ಬಿಇಒ ರಂಗಸ್ವಾಮಿ ಅಕ್ಷರ ದಾಸೋಹ ಕೊಠಡಿ ಉದ್ಘಾಟಿಸಲಿದ್ದಾರೆ. ಪುರಸಭೆ ಮುಖ್ಯಾಧಿಕಾರಿ ಕೆ.ಕೆ. ಮುತ್ತಪ್ಪ, ಪಿಎಸ್ಐ ಧರ್ಮೇಗೌಡ
ಮತ್ತಿತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆರ್. ರಂಗಸ್ವಾಮಿ, ಬಿಆರ್ಸಿ ಸಮನ್ವಯ ಅಧಿಕಾರಿ ಶಂಕರಯ್ಯ, ಶಿಕ್ಷಣ ಸಂಯೋಜಕ ಪರಮೇಶ್ವರಯ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ, ಸಿ.ಆರ್.ಪಿ. ಜಗದೀಶ್ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಿದ್ದಾರೆ. ಪುರಸಭಾ ಸದಸ್ಯರು, ಪೋಷಕರು, ಹಳೆ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

