ಅಧಿಕಾರಿಗಳ ಕಿರುಕುಳ; ಬಸ್ಚಾಲಕ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಬಿಎಂಟಿಸಿ ಗಸ್ತು ಅಧಿಕಾರಿಗಳು ಕಿರುಕುಳ ನೀಡುತ್ತಾರೆ ಎಂದು ಆರೋಪಿಸಿ ವೋಲ್ವೋ ಬಸ್ ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹೆಬ್ಬಾಳ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ಬನಶಂಕರಿ- ಹೆಬ್ಬಾಳ ಮಾರ್ಗದ ವೋಲ್ವೋ ಬಸ್ ಚಾಲಕ ಕಾಮಾಕ್ಷಿಪಾಳ್ಯ ನಿವಾಸಿ ವಿ. ಕೃಷ್ಣ ಆತ್ಮಹತ್ಯೆಗೆ ಯತ್ನಿಸದವರು. ಇವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಕೃಷ್ಣ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ವಿಷ ಸೇವಿಸಿ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವಿವರ: ಎರಡು ವರ್ಷದಿಂದ ಬಿಎಂಟಿಸಿ ಸಂಸ್ಥೆಯಲ್ಲಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿರುವ ಕೃಷ್ಣ ಅವರು ಬುಧವಾರ ಬನಶಂಕರಿಯಿಂದ ಹೆಬ್ಬಾಳಕ್ಕೆ ಬಂದಿದ್ದಾರೆ. ಮಾರ್ಗ ಮಧ್ಯೆ ವೀರಣ್ಣ ಪಾಳ್ಯ ನಿಲ್ದಾಣದಲ್ಲಿ ಬಸ್ ನಿಲುಗಡೆ ಮಾಡಬೇಕಿತ್ತು. ಆದರೆ, ಕೃಷ್ಣ ವೀರಣ್ಣಪಾಳ್ಯ ಬಳಿ ನಿಲುಗಡೆ ಮಾಡುವ ಬದಲು ಮೇಲ್ಸೆತುವೆ ಮೂಲಕ ನೇರವಾಗಿ ಹೆಬ್ಬಾಳಕ್ಕೆ ಬಂದಿದ್ದರು. ವಿಷಯ ತಿಳಿದ ಬಿಎಂಟಿಸಿ ಅಧಿಕಾರಿ ಜಯಪ್ಪ, ಟ್ರಿಪ್ ಉಲ್ಲಂಘನೆ ಸಂಬಂಧ ಚಾಲಕ ಕೃಷ್ಣ ಅವರಿಗೆ ಮೆಮೋ ನೀಡಿದ್ದರು.
ಇದರಿಂದ ಬೇಸರಗೊಂಡ ಚಾಲಕ ಕೃಷ್ಣ ಕರ್ತವ್ಯ ಮುಗಿದ ಬಳಿಕ ಹೆಬ್ಬಾಳ ಬಸ್ ನಿಲ್ದಾಣದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದರು. ವೀರಣ್ಣಪಾಳ್ಯ ಬಸ್ ನಿಲ್ದಾಣದ ಬಳಿ ಕಾಮಗಾರಿ ನಡೆಯುತ್ತಿದ್ದು ಸಂಚಾರ ದಟ್ಟಣೆ ಉಂಟಾಗುತ್ತದೆ. ಅಲ್ಲದೇ ಸಂಚಾರ ಪೊಲೀಸರು ಕೆಲವು ಮಾರ್ಗ ಬದಲಾವಣೆ ಮಾಡಿದ್ದರಿಂದ ಗೊಂದಲ ಉಂಟಾಗಿ ತಾನು ಮೇಲ್ಸೆತುವೆ ಮೇಲೆ ಹೋಗಿರುವುದಾಗಿ ಕೃಷ್ಣ ತಿಳಿಸಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

