ಅಕ್ಷರದೋಸಾ ವಿನೂತನ ಜಾಗೃತಿ ಕಾರ್ಯಕ್ರಮ
ರಾಮನಗರ: ಮತದಾರರಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ಅಕ್ಷರದೋಸಾ ಎಂಬ ವಿನೂತನ ಜಾಗೃತಿ ಕಾರ್ಯಕ್ರಮವು ಮಾ.27ರಂದು ಗುರುಭವನದಲ್ಲಿ ಮಧ್ಯಾಹ್ನ 3ಕ್ಕೆ ಜಿಲ್ಲಾ ಪಂಚಾಯಿತಿ, ಸ್ವೀಪ್ ಕಮಿಟಿ ಹಾಗೂ ಅಕ್ಷರ ದಾಸೋಹ ವಿಭಾಗದಿಂದ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಪೋಷಕರು ಮತ್ತು ಅಕ್ಷರ ದಾಸೋಹ ಸಿಬ್ಬಂದಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿ.ಪಂ. ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಂ.ವಿ. ವೆಂಕಟೇಶ್ ಕೋರಿದ್ದಾರೆ. ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕವಿಗೋಷ್ಠಿ, ಮ್ಯಾರಥಾನ್ ಓಟ, ಪಂಜಿನ ಮೆರವಣಿಗೆಯನ್ನು ಜಿಲ್ಲಾ ಕೇಂದ್ರದಿಂದ ತಾಲೂಕು ಕೇಂದ್ರಗಳಿಗೆ ಹಾಗೂ ಅಲ್ಲಿಂದ ಗ್ರಾ.ಪಂ.ಗಳಿಗೆ ತಲುಪಿಸಲು ಯೋಜಿಸಲಾಗಿದೆ. ಮದುವೆ ಮತ್ತಿತರ ಶುಭ ಸಮಾರಂಭಗಳು ಜರುಗುವ ಕಲ್ಯಾಣ ಮಂಟಪಗಳಲ್ಲಿ ಚುನಾವಣಾ ಮತದಾನದ ಅರಿವಿನ ಭಿತ್ತಿ ಪತ್ರಗಳು, ಕರಪತ್ರಗಳ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ವೆಂಕಟೇಶ್ ತಿಳಿಸಿದ್ದಾರೆ.
ಗ್ರಾಮೀಣಾ ಕಲಾ ಪ್ರತಿಭೋತ್ಸವ ಇಂದು
ನೆಲಮಂಗಲ: ಪಟ್ಟಣದ ಸದಾಶಿವನಗರದಲ್ಲಿ ರಂಗ ಶಿಕ್ಷಣ ಕೇಂದ್ರದ ವತಿಯಿಂದ ಮಾ. 27ರಂದು ಸಂಜೆ 4.30ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಿಂದ ಗ್ರಾಮೀಣಾ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಬೆಂಗಳೂರು ವಿಶ್ವವಿದ್ಯಾಲಯ ನಾಟಕ ಪ್ರವಾಚಕ ಡಾ.ಕೆ. ರಾಮಕೃಷ್ಣ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಹರ್ಷ ಗ್ರೂಪ್ಸ್ ಹರ್ಷ ಇಂಟರ್ ನ್ಯಾಷನಲ್ನ ಚೇರ್ಮ್ನ್ ಶಿವಕುಮಾರ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಜನಪದ ಗಾಯನ, ವೀರಭದ್ರ ಕುಣಿತ, ಕಂಸಾಳೆ, ಸೋಮನ ಕುಣಿತ, ವಿಚಾರ ಸಂಕಿರರ್ಣ, ಕೋಲಾಟ, ನಾಟಕವನ್ನು ಏರ್ಪಡಿಸಲಾಗಿದೆ. ಮುಖ್ಯ ಅತಿಥಿಗಳಾಗಿ ನಾಗರಿಕ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಕಲಾವಿದ ತಿಮ್ಮರಾಜು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

