ಬಾಂಬೆ ರೇಯಾನ್ ಹೊರಗೀಲಿ: 9ನೇ ದಿನಕ್ಕೆ ಧರಣಿ
ದೊಡ್ಡಬಳ್ಳಾಪುರ: ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿರುವ ಬಾಂಬೆ ರೇಯಾನ್ ಫ್ಯಾಷನ್ ಲಿಮಿಟೆಡ್ನ ಪ್ರಾಸೆಸ್ಸಿಂಗ್ ಘಟಕವನ್ನು ಲಾಕ್ಔಟ್ ಮಾಡಿರುವುದರ ವಿರುದ್ಧ ಕಾರ್ಮಿಕರು ಆರಂಭಿಸಿರುವ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಖಾನೆಯ ಮುಂದೆ 500ಕ್ಕೂ ಹೆಚ್ಚು ಕಾರ್ಮಿಕರು ಹಗಲು-ಇರುಳು ನಿರಂತರ ಧರಣಿ ಸತ್ಯಾಗ್ರಾಹ ನಡೆಸುತ್ತಿದ್ದಾರೆ.
ಕಾರ್ಖಾನೆ ಕಳೆದ 10 ದಿನಗಳ ಹಿಂದೆ ದಿಢೀರನೇ ಲಾಕೌಟ್ ನೊಟೀಸ್ ಪ್ರಕಟಿಸಿ ಕಾರ್ಖಾನೆ ಮುಚ್ಚಿತ್ತು.
ಈ ವಿಚಾರದಲ್ಲಿ ಕಾರ್ಮಿಕರನ್ನು ಗಣನೆಗೆ ತೆಗೆದುಕೊಂಡಿಲ್ಲ. ಕಾರ್ಮಿಕ ಕಾನೂನುಗಳನ್ನು ಕಂಪನಿ ಸ್ಪಷ್ಟವಾಗಿ ಉಲ್ಲಂಘಿಸಿದೆ. ಯಾವುದೇ ಮುನ್ಸೂಚನೆಯನ್ನೂ ನೀಡದೆ ದಿಢೀರನೇ ಕಾರ್ಖಾನೆ ಮುಚ್ಚಿರುವುದರಿಂದ ಸುಮಾರು 520 ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಕಾರ್ಮಿಕರ ಮೇಲೆ ಆಡಳಿತ ಮಂಡಲಿ ಅನಗತ್ಯವಾಗಿ ಕ್ಷುಲ್ಲಕ ಆರೋಪಗಳನ್ನು ಹೊರಿಸುತ್ತಿದೆ. ಇದಾವುದೂ ವಾಸ್ತವ ಅಲ್ಲ ಎಂದು ಕಾರ್ಮಿಕ ಮುಖಂಡರು ಆರೋಪಿಸಿದ್ದಾರೆ.
ಕಾರ್ಖಾನೆ ವರ್ತನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾರ್ಮಿಕ ಸಂಘಟನೆಗಳು, ಅಧಿಕಾರಿಗಳ ಮತ್ತು ಆಡಳಿತ ವರ್ಗದ ಧೋರಣೆ ಸರಿಯಲ್ಲ.
ಕಾರ್ಮಿಕ ಕಾನೂನುಗಳ ಪ್ರಕಾರ ಈ ರೀತಿ ಯಾವುದೇ ಪೂರ್ವ ಮಾಹಿತಿ ಇಲ್ಲದೆ ಲಾಕೌಟ್ ಮಾಡಿರುವುದು ಅಕ್ಷಮ್ಯ. ಹೇಳಿರುವ 12 ವಿವರಣೆಗಳ ಬಗ್ಗೆ ಕಾರ್ಮಿಕರಿಗೆ ಸ್ಪಷ್ಟನೆ ನೀಡಬೇಕಿದೆ. ಕೂಡಲೇ ಅಧಿಕಾರಿಗಳು ಈ ಬಗ್ಗೆ ಪ್ರತಿಕ್ರಿಯಿಸಬೇಕು. ಆಡಳಿತ ಮಂಡಲಿ ಈ ಕೂಡಲೇ ಕಾರ್ಮಿಕರ ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ಬಂದು ಅಹವಾಲು ಕೇಳಬೇಕು.
ಅವೈಜ್ಞಾನಿಕ ಹೊರಗೀಲಿ ರದ್ದು ಮಾಡಿ ಕಾರ್ಖಾನೆಯಲ್ಲಿ ಎಂದಿನಂತೆ ಕೆಲಸ ನಿರ್ವಹಿಸಲು ಅನುವು ಮಾಡಿಕೊಡಬೇಕು. ಕ್ಷುಲ್ಲಕ ಆರೋಪಗಳನ್ನು ಹಿಂದಕ್ಕೆ ಪಡೆದು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ತಪ್ಪಿದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಕಾರ್ಮಿಕರು ಎಚ್ಚರಿಕೆ ನೀಡಿದ್ದಾರೆ. ಈ ಮಧ್ಯೆ ಶಾಸಕರ ಮಧ್ಯಸ್ಥಿಕೆಯಲ್ಲಿ ನಡೆದ ಸಭೆ ಕೂಡ ಫಲಪ್ರದವಾಗಿಲ್ಲ. ಹಲವು ಸಾಮಾಜಿಕ ಸಂಘಟನೆಗಳು ಮತ್ತು ವಿವಿಧ ಚಳವಳಿ ಸಂಘಟನೆಗಳೂ ಕೂಡ ಹೋರಾಟಕ್ಕೆ ಬೆಂಬಲ ನೀಡಿದ್ದು ಹೋರಾಟ ತೀವ್ರ ಸ್ವರೂಪ ಪಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

