ಕಾಂಗ್ರೆಸ್ ಪರ ಸಚಿವ ರಾಮಲಿಂಗಾರೆಡ್ಡಿ ಬಿರುಸಿನ ಪ್ರಚಾರ
ಆನೇಕಲ್ಲು: ಬ್ರಿಟಿಷರ ವಿರುದ್ಧ ಅಹಿಂಸಾ ಮಾರ್ಗದಲ್ಲಿ ಹೋರಾಟ ಮಾಡಿ ದೇಶಕ್ಕೆ ಸ್ವಾತಂತ್ರ್ಯ ಬರಲು ಕಾಂಗ್ರೆಸ್ನ ಸಾವಿರಾರು ನೇತಾರರು ತ್ಯಾಗ ಮತ್ತು ಬಲಿದಾನ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ ನೇತಾರರು ಅಸಲಿ ದೇಶಭಕ್ತರು ಎಂದು ಕರೆಯಲು ಹೆಮ್ಮೆಯಾಗುತ್ತದೆ ಎಂದು ಸಾರಿಗೆ ಸಚಿವ ಆರ್. ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಅವರು ತಾಲೂಕಿನ ಬ್ಯಾಗಡದೇನಹಳ್ಳಿಯಲ್ಲಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಡಿ.ಕೆ. ಸುರೇಶ್ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.
ಕೈಗಾರಿಕಾ ಕ್ರಾಂತಿ, ಆಹಾರ ಕ್ರಾಂತಿ, ಪಂಚಾವಾರ್ಷಿಕ ಯೋಜನೆಗಳ ಮೂಲಕ ಹಂತ ಹಂತವಾಗಿ ದೇಶವನ್ನು ಮುನ್ನಡೆಸಿದ ಕೀರ್ತಿ ಕಾಂಗ್ರೆಸ್ಗೆ ಸಲ್ಲಬೇಕು ಎಂದರು. ಡಿ.ಕೆ. ಸುರೇಶ್ಗೆ ಮತ ನೀಡಬೇಕೆಂದು ಮನವಿ ಮಾಡಿದರು. ಶಾಸಕ ಬಿ.ಶಿವಣ್ಣ ಮಾತನಾಡಿ ಆನೇಕಲ್ ತಾಲೂಕಿಗೆ ತಾತಗುಣಿ ಎಸ್ಟೇಟ್ನಿಂದ ಹಾಗೂ ಜಂಬೂ ಸವಾರಿ ದಿಣ್ಣೆಯಿಂದ 15 ಎಂಎಲ್ಡಿ ನೀರು ತರಲು ಉನ್ನತ ಮಟ್ಟದ ಸಭೆಯಲ್ಲಿ ನಿರ್ಣಯವಾಗಿದೆ ಎಂದರು.
ಅಭ್ಯರ್ಥಿ ಸುರೇಶ್ ಮತಯಾಚನೆ ಮಾಡಿ ತಾಲೂಕಿನಲ್ಲಿ ಅಂತರ್ಜಲ ಕುಸಿದಿದ್ದು ಫ್ಲೋರೈಡ್ಯುಕ್ತ ನೀರಿನ ಬದಲು ಸಂಸ್ಕರಿಸಿದ ಶುದ್ಧ ಕುಡಿಯುವ ನೀರು ಘಟಕ ತೆರೆಯಲಾಗಿದೆ. ಆನೇಕಲ್ ಚಂದಾಪುರ ಜೋಡಿ ರಸ್ತೆ ಅನುಮೋದನೆ ಪಡೆದಿದೆ. 6 ತಿಂಗಳ ಅಲ್ಪ ಅವಧಿಯಲ್ಲಿ ಕ್ಷೇತ್ರದ ಬಹುತೇಕ ಸಮಸ್ಯೆಗಳಿಗೆ ಸ್ಪಂದಿಸಿದ್ದು ಹೊಸ ಯೋಜನೆಗಳನ್ನು ತರಲು ಆಶೀರ್ವಾದ ನೀಡಬೇಕೆಂದರು. ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಣ್ಣ, ಆರ್.ಕೆ. ರಮೇಶ್, ಸುಬ್ಬಣ್ಣ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

