ಬೆಂಕಿ ಹಚ್ಚಿಕೊಂಡು ವೃದ್ಧೆ ಆತ್ಮಹತ್ಯೆ
ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಕರೇನಹಳ್ಳಿ ಬಡಾವಣೆಯಲ್ಲಿ ಲಕ್ಷ್ಮಮ್ಮ (65) ಎಂಬಾಕೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿರುವ ಘಟನೆಗೆ ಗುರುವಾರ ಬೆಳಗ್ಗೆ ನಡೆದಿದೆ. ಈಕೆ ಮಾನಸಿಕವಾಗಿ ಅಸ್ವಸ್ಥೆಯಾಗಿದ್ದು, ಕೆಲ ದಿನಗಳ ಹಿಂದೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ನ್ಯಾಯಾಂಗ ವ್ಯವಸ್ಥೆಯ ಚಿತ್ರಪಟ ಪ್ರದರ್ಶನ
ಹಲಗೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಭಾರತ ನ್ಯಾಯಾಂಗ ವ್ಯವಸ್ಥೆಯ ಚಿತ್ರಪಟ ಪ್ರದರ್ಶನ ಮತ್ತು ಹಕ್ಕುಗಳ ರಕ್ಷಣೆಯಲ್ಲಿ ನ್ಯಾಯಾಂಗದ ಪಾತ್ರ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಗುರುವಾರ ಹಮ್ಮಿಕೊಳ್ಳಲಾಗಿತ್ತು. ಶ್ರೀರಂಗಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಹೇಮಾಂತ್ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭಾರತ ಸ್ವಾತಂತ್ರ್ಯ ಪೂರ್ವದಿಂದಲೂ ಹಕ್ಕುಗಳಿಗಾಗಿ ಹೋರಾಟ ಮಾಡಿದೆ ಎಂದ ಅವರು ಸಂವಿಧಾನದ ಕುರಿತು ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು. ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ರಶ್ಮಿ ಮಾತನಾಡಿ, ಹಕ್ಕುಗಳ ರಕ್ಷಣೆಯಲ್ಲಿ ನ್ಯಾಯ ವಿಳಂಬ ವಾಗದಂತೆ ಮಾಡಲು ನ್ಯಾಯಾಲಯಗಳ ಹಾಗೂ ನ್ಯಾಯಾಧೀಶರ ಸಂಖ್ಯೆ ಹೆಚ್ಚಿಸಬೇಕು. ಆಗ ನ್ಯಾಯ ಅತೀ ಶೀಘ್ರವಾಗಿ ಎಲ್ಲರಿಗೂ ಸಿಗುತ್ತದೆ ಎಂದರು. ಕಾಲೇಜು ಪ್ರಾಂಶುಪಾಲ ಚಿನ್ನಸ್ವಾಮಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳಾದ ನೀವು ಕಾನೂನಿನ ಬಗ್ಗೆ ತಿಳಿದುಕೊಂಡು ನೀವು ಸಹ ಕಾನೂನನ್ನು ಕಾಪಾಡಲು ವಕೀಲ ಅಥವಾ ನ್ಯಾಯಾಧೀಶರಾಗಿ ವೃತ್ತಿ ಆಯ್ಕೆ ಮಾಡಿಕೊಳ್ಳುವಂತೆ ಕರೆ ನೀಡಿದರು. ಪ್ರಾಧ್ಯಾಪಕರಾದ ಸೀಮಾಕೌಸರ್, ವೇದಾವತಿ, ತಾಜ್, ಉಮೇಶ್ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

