ಬೆಂಗಳೂರು ಗ್ರಾಮಾಂತರ

ಲೋಕಸಭಾ ಚುನಾವಣೆ: ಬಿಜೆಪಿ ಜಯಭೇರಿ ಖಚಿತ

Published On :

ವಿಜಯಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಜಯಭೇರಿ ಬಾರಿಸುವುದು ಖಚಿತ ಎಂದು ಅರಿತ  ಕೆಲವು ನಾಯಕರು ಇಲ್ಲ ಸಲ್ಲದ ಆರೋಪಗಳನ್ನು ನನ್ನ ಮೇಲೆ ಹೊರಿಸುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡ ತಿಳಿಸಿದರು.
ಅವರು ಪಟ್ಟಣದ ಇತಿಹಾಸ ಪ್ರಸಿದ್ಧ ತಮ್ಮ ಮನೆ ದೇವರಾದ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕೆಲಸಗಳಿಗೆ ನೀಡಿರುವ ಆದ್ಯತೆಯನ್ನು ಮರೆಯದೇ ಸಾರ್ವಜನಿಕರು ಇಂದು ನನ್ನನ್ನು ಗುರುತಿಸುತ್ತಿದ್ದು, ಇದನ್ನು ಸಹಿಸದವರು ಬಚ್ಚೇಗೌಡ ಒಬ್ಬ ರೌಡಿ, ಭೂಗಳ್ಳ ಎನ್ನುವಂತಹ ಸುಳ್ಳು ಹೇಳಿಕೆಗಳನ್ನು ಜನರಲ್ಲಿ ಬಿತ್ತುತ್ತಿದ್ದಾರೆ. ಯಾರು ಏನೇ ಹೇಳಿದರೂ ಕೂಡ ಇನ್ನೊಬ್ಬರ ಬಗ್ಗೆ ಟೀಕೆ ಟಿಪ್ಪಣಿಯನ್ನು ನಾನು ಮಾಡುವುದಿಲ್ಲ ಎಂದರು. ನನ್ನದು ಸೇವಾ ಮನೋಭಾವ ಎಂದ ಅವರು ನಾನು ಜೋಡಿದಾರ ಸಾಮಂತರ ಕುಟುಂಬದಿಂದ ಬಂದಿದ್ದು ಹಿಂದಿನ ಕಾಲದಲ್ಲಿ ಸಾಕಷ್ಟು ನಮ್ಮ ಜಮೀನನ್ನು ಸರ್ಕಾರ ಬೇರೆಯವರಿಗೆ ಕೊಡಿಸಿದೆ. ನನ್ನ ಮೊದಲ ಆದ್ಯತೆ ಮೂಲ ಸೌಕರ್ಯ ಕಲ್ಪಿಸುವುದಾಗಿದ್ದು ಈಗಾಗಲೇ ಈ ಸೌಕರ್ಯವನ್ನು ಬಿಜೆಪಿ ಸರ್ಕಾರ ಇದ್ದಾಗ ಮಾಡಿದ್ದೇನೆ ಎಂದರು.  ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಗುರುಸ್ವಾಮಿ, ದೇ.ಸು.ನಾಗರಾಜ್, ವಿಜಯಪುರ ಟೌನ್ ಘಟಕದ ಅಧ್ಯಕ್ಷ ಕನಕರಾಜು, ರಾಮಕೃಷ್ಣ ಹೆಗಡೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.