ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ
ಆನೇಕಲ್:ಎಸ್ಎಸ್ಎಲ್ಸಿ ಪರೀಕ್ಷೆಗಳು ಶುಕ್ರವಾರದಿಂದ ಪ್ರಾರಂಭವಾಗಿದ್ದು, ತಾಲೂಕಿನ ಸರ್ಕಾರಿ, ಅನುದಾನಿತ ಅನುದಾನ ರಹಿತ ಶಾಲೆಗಳಿಂದ 4983 ವಿದ್ಯಾಥಿಗಳು ಈ ಬಾರಿ ಪರೀಕ್ಷೆ ಬರೆಯುತ್ತಿದ್ದಾರೆ.ಅವರಲ್ಲಿ 2553 ಬಾಲಕರು, 2430 ಬಾಲಕಿಯರು ಇದ್ದಾರೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಬಿ.ಹೆಚ್. ಶೇಖರಪ್ಪ ತಿಳಿಸಿದ್ದಾರೆ. ತಾಲೂಕಿನಾದ್ಯಂತ 18 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲಾಧಿಕಾರಿ, ತಹಸೀಲ್ದಾರ್, ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳ ಮಟ್ಟದಲ್ಲಿ ಮೂರು ಜಾಗೃತಾದಳ ರಚಿಸಿ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು. 18 ಕೇಂದ್ರಗಳಿಗೂ ಮುಖ್ಯ ಅಧೀಕ್ಷಕರು, 36 ಸ್ಥಾನಿಕ ಜಾಗೃತದಳವನ್ನು ನೇಮಿಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಹಾಗೂ ಯಶಸ್ವಿಯಾಗಿ ನಡೆಸಲು ಪೊಲೀಸ್ ಬಂದೋಬಸ್ತ್ ಏರ್ಪಡಿಲಾಗಿದೆ ಎಂದು ತಿಳಿಸಿದರು.
ವಿಜಯಪುರದಲ್ಲಿ ಜೆಡಿಎಸ್ ಸಭೆ ಇಂದು
ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಎಸ್ಸಿ ಮತ್ತು ಎಸ್ಟಿ ಕಾರ್ಯಕರ್ತರ ಸಭೆ ವಿಜಯಪುರ ದೇವನಹಳ್ಳಿ ರಸ್ತೆಯಲ್ಲಿರುವ ಗೋಶಾಲೆಯಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ಶಾಸಕ ಪಿಳ್ಳಮುನಿಶಾಮಪ್ಪ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಪಕ್ಷದ ಸಂಚಾಲಕ ಬಿ.ಕೆ. ಶಿವಪ್ಪ ತಿಳಿಸಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆ ಸಿಬ್ಬಂದಿಗೆ ಅಧಿನಿಯಮ
ಬೆಂಗಳೂರು: ಕರ್ನಾಟಕ ಖಾಸಗಿ ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿ ಅಧಿ ನಿಯಮವನ್ನು ಜೂ.1ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಫೆ.12ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಅನುದಾನಿತ ರಹಿತ ಅವಧಿಯಲ್ಲಿ ಕಾರ್ಯನಿರ್ವಹಿಸಿರುವವರಿಗೆ ಸರ್ಕಾರ ಭರವಸೆ ನೀಡಿರುವಂತೆ ರು. 280 ಕೋಟಿ ಕಾಲ್ಪನಿಕ ವೇತನ ನಿಗಧಿಪಡಿಸುವಂತೆ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟ ಮನವಿ ಮಾಡಿತ್ತು. ಶಿಕ್ಷಣ ಸಂಘಟನೆಗಳು ಲಿಖಿತವಾಗಿ ತಿಳಿಸಿರುವಂತೆ ರು. 280 ಕೋಟಿವರೆಗೆ ಬರುವ ಆರ್ಥಿಕ ಹೊಣೆ ನಿರ್ವಹಿಸುವುದಾಗಿ ಷರತ್ತುಬದ್ಧ ಭರವಸೆ ನೀಡಲಾಗಿದೆ. ಶಾಲಾ- ಕಾಲೇಜು ಸಿಬ್ಬಂದಿ ಕಾಲ್ಪನಿಕ ಸೌಲಭ್ಯ ಪಡೆಯದವರು ಮಾತ್ರ ಈ ಕುರಿತ ಮಾಹಿತಿಯನ್ನು ಏ.2ರೊಳಗೆ ನೀಡಬೇಕು ಎಂದು ಸಂಘಟನೆಗಳ ಒಕ್ಕೂಟದ ಪರವಾಗಿ ಅಧ್ಯಕ್ಷ ಎಂ.ಪಿ. ಕರಬಸಪ್ಪ ವಿನಂತಿಸಿದ್ದಾರೆ.
ಕ್ರೀಡಾ ತರಬೇತಿ
ಬೆಂಗಳೂರು: ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಏ.3ರಿಂದ ಮೇ 13 ರವರೆಗೆ ಕ್ರೀಡಾ ತರಬೇತಿ ಶಿಬಿರ ಆಯೋಜನೆಗೊಂಡಿದೆ. ಷಡಲ್ ಬ್ಯಾಡ್ಮಿಂಟನ್, ಟೆನ್ನಿಸ್, ಬ್ಯಾಸ್ಕೆಟ್ ಬಾಲ್ ಕ್ರೀಡೆಗಳು ನಡೆಯಲಿವೆ. ಆಸಕ್ತರು ದೈಹಿಕ ಶಿಕ್ಷಣ ನಿರ್ದೇಶಕ ಎಂ. ನಾಗರಾಜರನ್ನು ಸಂಪರ್ಕಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

