ಕನಕಪುರ: 4,248 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು
ಕನಕಪುರ: ಕನಕಪುರ ತಾಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ಶುಕ್ರವಾರ ಪ್ರಾರಂಭಗೊಂಡವು. ತಾಲೂಕಿನಾದ್ಯಂತ 27 ಪರೀಕ್ಷಾ ಕೇಂದ್ರಗಳಲ್ಲಿ 2,181 ಬಾಲಕಿಯರು ಹಾಗೂ 2,067 ಬಾಲಕರು ಸೇರಿದಂತೆ ಒಟ್ಟಾರೆ 4,248 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದಾರೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.
ಸುಗಮವಾಗಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುವಂತೆ ಸಕಲ ಕ್ರಮಗಳನ್ನು ಕೈಗೊಂಡಿದ್ದು, ತಹಸೀಲ್ದಾರ್, ಬಿಇಓ ನೇತೃತ್ವದಲ್ಲಿ ಎರಡು ಜಾಗೃತದಳ, ತನಿಖಾತಂಡಗಳನ್ನು ರಚಿಸಿದ್ದು ಪರೀಕ್ಷಾ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಿದೆ. ಪಟ್ಟಣದ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೂ ಇಬ್ಬರು ಆಂತರಿಕ ಜಾಗೃತಾದಳ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.
ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಪಡೆದು ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಸಮಯದಲ್ಲಿ ತಲುಪಿಸಲು ಐದು ತಂಡಗಳನ್ನು ರಚಿಸಲಾಗಿದೆ. ತಾಲೂಕು ವ್ಯಾಪ್ತಿಯಲ್ಲಿ ಬಿಸಿಲಿಸಿ ಝಳ ಹೆಚ್ಚಾಗಿರುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾದರೆ ಸೂಕ್ತ ಚಿಕಿತ್ಸೆ ಒದಗಿಸಲು ಆರೋಗ್ಯ ಸುಶ್ರೂಶಕಿಯರನ್ನು ನೇಮಿಸಲಾಗಿದೆ.
ಯಾವುದೇ ಕೇಂದ್ರದಲ್ಲಿ ಅವ್ಯವಹಾರ, ನಕಲು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಶಿವಕುಮಾರರ್ವಿವರಗಳನ್ನು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

