ಬೆಂಗಳೂರು ಗ್ರಾಮಾಂತರ

ತಪ್ಪದೇ ಮತ ಚಲಾಯಿಸಿ: ಡಾ. ವೆಂಕಟೇಶ್

Published On :

ಮಾಗಡಿ: ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಿ ಪ್ರಜಾಪ್ರಭುವತ್ವನ್ನು ಎತ್ತಿ ಹಿಡಿಯಬೇಕು. ಪ್ರತಿಯೊಂದು ಮತವೂ ದೇಶದ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಜಿಲ್ಲಾ ಪಂಚಾಯ್ತಿ ಸಿಇಒ ಡಾ.ವೆಂಕಟೇಶ್ ಮತದಾರರಿಗೆ ಕರೆ ಕೊಟ್ಟರು.
ಅವರು ಮಾಗಡಿ ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಅಕ್ಷರ ದೋಸಾ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬ ಪ್ರಜೆಯೂ ಕಡ್ಡಾಯವಾಗಿ ಮತ ಹಾಬೇಕು ಎಂಬುದು ಕಾರ್ಯಕ್ರಮದ ಉದ್ದೇಶ.  ಎಲ್ಲರೂ ಮತದಾನ ಮಾಡಿ ಪ್ರಜಾಪ್ರಭುತ್ವ ಭದ್ರಪಡಿಸಿ ಹೀಗೆ ನಾನಾ ಘೋಷಣೆಗಳನ್ನು ದೋಸೆಯ ರೂಪದಲ್ಲಿ ಮೂಡಿಸಿ ಉಚಿತವಾಗಿ ಆ ದೋಸೆಗಳನ್ನು ಹಂಚುವ ಮೂಲಕ ಮತದಾರರನ್ನು ಪ್ರೇರೇಪಿಸುವ ಕೆಲಸ ಕೆಂಪೇಗೌಡ ವೃತ್ತದ ಬಸ್ ನಿಲ್ದಾಣದಲ್ಲಿ ಸಾಕಷ್ಟು ಹೊತ್ತು ನಡೆದು, ಗಮನ ಸೆಳೆಯಿತು. ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಕೆ.ಬಿ. ಅಕ್ಕೋಜಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಆರ್. ರಂಗಸ್ವಾಮಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.