ಬೆಂ.ಗ್ರಾಮಾಂತರ: ಇಂದು ದೇವೇಗೌಡರ ಪ್ರವೇಶ
ಚನ್ನಪಟ್ಟಣ: ಬೆಂ.ಗ್ರಾಮಾಂತರ ಲೋಕಸಭಾ ಕ್ಷೇತ್ರದ ಯುದ್ಧಕ್ಕೆ ಜೆಡಿಎಸ್ ಅಧಿಪತಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಶನಿವಾರ ರಂಗಪ್ರವೇಶ ಮಾಡಲಿದ್ದಾರೆ.
ಇದರೊಂದಿಗೆ ಜೆಡಿಎಸ್- ಕಾಂಗ್ರೆಸ್ ಪಕ್ಷಗಳ ಪ್ರತಿಷ್ಠೆಯ ಅಖಾಡವೆನಿಸಿದ ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ ದೇವೇಗೌಡರು ಅಖಾಡಕ್ಕಿಳಿದಿದ್ದು, ತಮಗೆ ರಾಜಕೀಯ ಪುನರ್ಜನ್ಮ ನೀಡಿದ ಬೊಂಬೆನಗರಿಯಿಂದಲೇ ಕ್ಷೇತ್ರದ ದಂಡಯಾತ್ರೆ ಪ್ರಾರಂಭವಾಗಲಿದೆ. ಮಾ.29 ರಂದು ಬೆಳಿಗ್ಗೆ 11ಗಂಟೆಗೆ ಪಟ್ಟಣದ 6ನೇ ಅಡ್ಡರಸ್ತೆಯಲ್ಲಿರುವ ಮಾಜಿ ಶಾಸಕ ಎಂ.ಸಿ.ಅಶ್ವತ್ಥ್ ನಿವಾಸದಲ್ಲಿ ತಾಲೂಕು ಜೆಡಿಎಸ್ ಪದಾಧಿಕಾರಿಗಳು, ಮುಖಂಡರು ಹಾಗೂ ಚುನಾಯಿತ ಪ್ರತಿನಿಧಿಗಳ ಸಭೆ ಕರೆದಿದ್ದು ಸಭೆಯಲ್ಲಿ ಚುನಾವಣಾ ಸಿದ್ಧತೆ ಮತ್ತು ಪಕ್ಷದ ಪ್ರಮುಖರ ಪಾತ್ರಗಳ ಬಗ್ಗೆ ಗೌಡರು ನಿರ್ದೇಶನ ನೀಡಲಿದ್ದಾರೆ. ಇದು ಗೌಡರ ಮೊದಲ ಚುನಾವಣಾ ಪ್ರಚಾರ ಕಾರ್ಯ.
ಸಭೆಗೆ ಪಕ್ಷದ ಎಲ್ಲಾ ಚುನಾಯಿತ ಪ್ರತಿನಿಧಿಗಳು, ತಾಲೂಕು ಮತ್ತು ಜಿಲ್ಲಾ ಘಟಕದ ಪದಾಧಿಕಾರಿಗಳು, ಹಾಗೂ ಪ್ರಮುಖ ಮುಖಂಡರು ಖುದ್ದು ಹಾಜರಾಗುವಂತೆ ತಾಲೂಕು ಜೆಡಿಎಸ್ ಅಧ್ಯಕ್ಷ ವಡ್ಡರಹಳ್ಳಿ ರಾಜಣ್ಣ ತಿಳಿಸಿದ್ದಾರೆ. ಸಭೆಗೆ ಪಕ್ಷದ ಅಭ್ಯರ್ಥಿ ಪ್ರಭಾಕರ ರೆಡ್ಡಿ ಸೇರಿದಂತೆ ಇನ್ನಿತರ ಮುಖಂಡರು ಆಗಮಿಸಲಿದ್ದಾರೆ.
ಒಗ್ಗಟ್ಟಿನ ಮಂತ್ರ: ತಾಲೂಕು ಜೆಡಿಎಸ್ಗೆ ಹೊಡೆತ ನೀಡುತ್ತಿರುವ ಅಸಮಾಧಾನ, ಗುಂಪುಗಾರಿಕೆ, ಭಿನ್ನ ಮತ ಮೊದಲಾದ ಶನಿಕಾಟದ ನಿರ್ಮೂಲನೆಗೆ ಶನಿವಾರವೇ ಮಹೂರ್ತ ನಿಗದಿ ಮಾಡಿದ್ದು ದೇವೇಗೌಡರು ಎಲ್ಲಾ ಮುಖಂಡರೊಂದಿಗೆ ಚರ್ಚಿಸಿ ವೈಮನಸ್ಯಗಳನ್ನು ತೊಡೆದುಹಾಕಿ ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಕೆಲಸ ಮಾಡುವಂತೆ ಸೂಚನೆ ನೀಡಲಿರುವುದಾಗಿ ಪಕ್ಷದ ಮೂಲಗಳು ಮಾಹಿತಿ ನೀಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

