ಬೆಂಗಳೂರು ಗ್ರಾಮಾಂತರ

ಹುರಿಯಾಳುಗಳಿಂದ ಕ್ಷೇತ್ರದ ಹಲವೆಡೆ ಮತ ಬೇಟೆ ಶುರು

Published On :

ರಾಮನಗರ: ನಾಮಪತ್ರ ಹಿಂತೆಗೆತ ಪ್ರಕ್ರಿಯೆ ಪೂರ್ಣಗೊಂಡು, ಸ್ಪರ್ಧಾ ಕಣದ ಅಂತಿಮ ಚಿತ್ರಣ ಮೂಡುವ
ಮುನ್ನವೇ ಪ್ರಮುಖ ರಾಜಕೀಯ ಪಕ್ಷಗಳ ಹುರಿಯಾಳುಗಳು ಕ್ಷೇತ್ರದ ವಿವಿಧೆಡೆ ಮತ ಬೇಟೆಗೆ ಇಳಿದಿದ್ದಾರೆ.  
ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಎಎಪಿ ಅಭ್ಯರ್ಥಿಗಳು ಅಲ್ಲಲ್ಲಿ ಮತಯಾಚನೆ, ಮುಖಂಡರು ಮತ್ತು ಪ್ರಮುಖ ಕಾರ್ಯಕರ್ತರ ಸಭೆ ಸೇರಿದಂತೆ ಲೋಕಸಭಾ ಚುನಾವಣಾ ತಾಲೀಮು ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಚುನಾವಣೆ ಕಾವೇರುತ್ತಿದೆ.
ಕಾಂಗ್ರೆಸ್ ಪ್ರಚಾರ: ಹಾಲಿ ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ರಾಮನಗರ ವಿಧಾನಸಭಾ ಕ್ಷೇತ್ರದ ಕೈಲಾಂಚ ಹೋಬಳಿ, ರಾಮನಗರ ನಗರಸಭೆಯ ವಿವಿಧ ವಾರ್ಡ್ ಹಾಗೂ ಈ ಕ್ಷೇತ್ರಕ್ಕೆ ಸೇರಿದ  ಕನಕಪುರ ತಾಲೂಕಿನ ಹಾರೋಹಳ್ಳಿ, ಮರಳವಾಡಿ ಹೋಬಳಿಯ ವಿವಿಧೆಡೆ ಪ್ರಚಾರ ನಡೆಸಿದರು.
ಎಚ್‌ಡಿಕೆ ನಿವಾಸದಲ್ಲಿ ಸಭೆ: ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಕನಕಪುರ ತಾಲೂಕಿನಲ್ಲಿ ಜೆಡಿಎಸ್ ತೀವ್ರ ಹಿನ್ನೆಡೆ ಅನುಭವಿಸಿದೆ. ಈಚೆಗೆ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಕೂಡ ತಟಸ್ಥವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕನಕಪುರ ತಾಲೂಕಿನ ಪಕ್ಷದ ಪ್ರಮುಖ ಕಾರ್ಯಕರ್ತರು ಮತ್ತು ಮುಖಂಡರ ಸಭೆಯನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರಿನಲ್ಲಿ ಶುಕ್ರವಾರ ನಡೆಸಿದ್ದು, ಅಲ್ಲಿ ಅಭ್ಯರ್ಥಿ ಪ್ರಭಾಕರರೆಡ್ಡಿ ಕೂಡ ಭಾಗಿಯಾಗಿದ್ದಾರೆ.
ಬಿಜೆಪಿ ಮತಯಾಚನೆ: ಬಿಜೆಪಿ ಅಭ್ಯರ್ಥಿ ಪಿ. ಮುನಿರಾಜುಗೌಡ ಅವರು ಮಾಜಿ ಸಚಿವ ನಾರಾಯಣಸ್ವಾಮಿ ಸಹಿತ ವಿವಿಧ ಮುಖಂಡರು ಮತ್ತು ಕಾರ್ಯಕರ್ತರ ದಂಡು ಸಮೇತ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ವಿಧಾನಸಭಾ ಕ್ಷೇತ್ರದ ಸರ್ಜಾಪುರ ಸುತ್ತಮುತ್ತ ಮತಯಾಚನೆ ನಡೆಸಿದ್ದಾರೆ. ಎಎಪಿ ಅಭ್ಯರ್ಥಿ ರವಿ ಕೃಷ್ಣಾರೆಡ್ಡಿ ಕೂಡ ಮತಯಾಚನೆಯಲ್ಲಿ ತೊಡಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.