ಚಿಕ್ಕಬಳ್ಳಾಪುರದಲ್ಲಿ 19 ಮಂದಿ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಅಂತಿಮವಾಗಿ 19 ಮಂದಿ ಕಣದಲ್ಲಿ ಉಳಿದಿದ್ದು, ವಿವಿಧ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಅದ್ಧೂರಿ ಪ್ರಚಾರದಲ್ಲಿ ನಿರತರಾಗಿದ್ದರೆ, ಜಿಲ್ಲಾ ಚುನಾವಣಾಧಿಕಾರಿಗಳು ಸೇರಿ ವಿವಿಧ ಹಂತದ ಅಧಿಕಾರಿಗಳು ಮತದಾನ,ಮತ ಎಣಿಕೆ ಪ್ರಕ್ರಿಯೆ ಶಾಂತಿಯುತವಾಗಿ ಮುಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ.
ಆಂಧ್ರದ ಗಡಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಮೂರು ಜಿಲ್ಲೆಗಳ ಮಿಶ್ರಣವಾಗಿದ್ದು, ಮೂವರು ಜಿಲ್ಲಾಧಿಕಾರಿಗಳ ಹೊಣೆಗಾರಿಕೆಯಲ್ಲಿ ಚುನಾವಣಾ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಕ್ಷೇತ್ರ ಚಿಕ್ಕಬಳ್ಳಾಪುರ, ಗೌರಿಬಿದನೂರು, ಬಾಗೇಪಲ್ಲಿ, ನೆಲಮಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ, ದೇವನಹಳ್ಳಿ, ಯಲಹಂಕ ಸೇರಿ 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಲೋಕಸಭಾ ಕ್ಷೇತ್ರದಲ್ಲಿ 15,99,394 ಮತದಾರರಿದ್ದರು.
ಮತದಾರರ ವಿವರ: ಇದರಲ್ಲಿ 8,14,277 ಪುರುಷರು ಮತ್ತು 7,85,050 ಮಹಿಳೆಯರು ಮತ್ತು 67 ಇತರೆ ಮತದಾರರು ಇದ್ದರು. 46,729 ಮಂದಿ ಹೊಸ ಮತದಾರರಲ್ಲಿ 1,668 ಮತದಾರರನ್ನು ಕೈ ಬಿಟ್ಟಿದ್ದು, ಉಳಿದಂತೆ 45,061 ಮತದಾರರು ಸೇರ್ಪಡೆಯಾಗಿದ್ದಾರೆ. ಇದೀಗ ಒಟ್ಟಾರೆ 16,44,455 ಮತದಾರರಿದ್ದಾರೆ. ಗೌರಿಬಿದನೂರಿನಲ್ಲಿ 253 ಮತಗಟ್ಟೆಗಳು ಮತ್ತು 1,93,958 ಮತದಾರರು, ಬಾಗೇಪಲ್ಲಿಯಲ್ಲಿ 251 ಮತಗಟ್ಟೆಗಳು ಮತ್ತು 1,81,818, ಚಿಕ್ಕಬಳ್ಳಾಫುರದಲ್ಲಿ 237 ಮತಗಟ್ಟೆಗಳು ಇರಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

