ಹಲ್ಲೆ ಖಂಡಿಸಿ ಕಚೇರಿಗೆ ಬೀಗ ಜಡಿದು ಕಾರ್ಮಿಕರ ಪ್ರತಿಭಟನೆ
ಮದ್ದೂರು: ಭದ್ರತಾಧಿಕಾರಿ ಪುಟ್ಟಸ್ವಾಮಿ ಮೇಲೆ ಗುತ್ತಿಗೆ ವಾಹನ ಚಾಲಕ ಉಮೇಶ್ ಹಲ್ಲೆ ನಡೆಸಿರುವುದನ್ನು ಖಂಡಿಸಿ ಗೆಜ್ಜಲಗೆರೆ ಜಿಲ್ಲಾ ಹಾಲು ಒಕ್ಕೂಟ ಕಾರ್ಮಿಕರು ಶನಿವಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಒಕ್ಕೂಟದ ಕಾರ್ಮಿಕ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆಗೆ ಇಳಿದ ನೂರಾರು ಕಾರ್ಮಿಕರು ಆಡಳಿತ ಮಂಡಳಿ ಕಚೇರಿಗೆ ಬೀಗ ಜಡಿದು ಧರಣಿ ನಡೆಸಿದರು. ಪ್ರತಿಭಟನೆಯಿಂದಾಗಿ ಒಕ್ಕೂಟದ ಕಚೇರಿಯ ಎಲ್ಲಾ ಕೆಲಸ ಕಾರ್ಯಗಳು ಸ್ಥಗಿತಗೊಂಡಿತ್ತು. ಪುಟ್ಟಸ್ವಾಮಿ ಮೇಲೆ ಹಲ್ಲೆ ನಡೆಸಿದ ಚಾಲಕ ಉಮೇಶ್ ವಿರುದ್ಧ ಘೋಷಣೆ ಕೂಗಿ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಒಕ್ಕೂಟದ ಎಂಡಿ ಡಾ. ಸ್ವಾಮಿ ಅವರನ್ನು ಕಾರ್ಮಿಕ ಮುಖಂಡರು ತರಾಟೆಗೆ ತೆಗೆದುಕೊಂಡರು. ಪುಟ್ಟಸ್ವಾಮಿ ಮೇಲೆ ಹಲ್ಲೆ ನಡೆಸಿದ ಚಾಲಕ ಉಮೇಶ್ರನ್ನು ಕೂಡಲೇ ಬಂಧಿಸಬೇಕು. ವಾಹನ ಗುತ್ತಿಗೆ ರದ್ದು ಪಡಿಸುವವರೆಗೆ ಧರಣಿ ಕೈಬಿಡುವುದಿಲ್ಲ ಎಂದು ಕಾರ್ಮಿಕ ಮುಖಂಡರು ಪಟ್ಟುಹಿಡಿದರು. ಎಂಡಿ ಡಾ.ಸ್ವಾಮಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಪ್ರತಿಭಟನೆ ಹಿಂದಕ್ಕೆ ಪಡೆದರು. ಕೆ.ಎಸ್. ವಿಜಯಕುಮಾರ್ ಇತರರಿದ್ದರು.
ಬಿಜೆಪಿ ಅಭ್ಯರ್ಥಿ ಶಿವಲಿಂಗಯ್ಯ ಬಿರುಸಿನ ಪ್ರಚಾರ
ಪಾಂಡವಪುರ: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶಿವಲಿಂಗಯ್ಯ ಶನಿವಾರ ತಾಲೂಕಿನ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು. ತಾಲೂಕಿನ ಕೆನ್ನಾಳು, ಕ್ಯಾತನಹಳ್ಳಿ, ಹರವು, ಅರಳಕುಪ್ಪೆ, ಕಟೇರಿಯಲ್ಲಿ ಬೆಂಬಲಿಗರೊಂದಿಗೆ ಮನೆ ಮೆನೆಗೆ ತೆರಳಿ ಮತಯಾಚನೆ ಮಾಡಿದ ನಂತರ ಮಾತನಾಡಿದ ಬಿಜೆಪಿ ಅಭ್ಯರ್ಥಿ ಶಿವಲಿಂಗಯ್ಯ, ಯುವ ಜನಾಂಗ ಬಿಜೆಪಿ ಬೆಂಬಲಿಸುವ ವಿಶ್ವಾಸವಿದೆ. ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಗುಜರಾತ್ ರಾಜ್ಯವನ್ನು ಅಭಿವೃದ್ಧಿ ಪಡಿಸಿ ದೇಶದಲ್ಲೇ ಮೊದಲ ಸ್ಥಾನಕ್ಕೆರಿಸಿರುವ ನರೇಂದ್ರಮೋದಿ ಅವರನ್ನು ಬಿಜೆಪಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜನತೆ ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸುವರು ಎಂದರು. ಜಿಲ್ಲೆಯಲ್ಲಿ ಮೋದಿ ಅಲೆ ಹೆಚ್ಚಾಗಿದೆ. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಜನತೆ ಬಿಜೆಪಿ ಬೆಂಬಲಿಸುವ ಮೂಲಕ ಜಿಲ್ಲೆಯಲ್ಲಿ ಕಮಲ ಅರಳಿಸುವ ನಂಬಿಕೆ ನನಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

