ಎಎಪಿಗೆ ವಾಹನಕ್ಕೆ ಕಲ್ಲು ತೂರಿದ ಕಿಡಿಗೇಡಿಗಳು
ಕನಕಪುರ: ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ್ ಅವರು ಎಎಪಿ ಅಭ್ಯರ್ಥಿ ರವಿಕೃಷ್ಣಾರೆಡ್ಡಿ ಪರ ಪ್ರಚಾರ ನಡೆಸಲು ಕನಕಪುರ ತಾಲೂಕಿನ ಹಾರೋಹಳ್ಳಿಗೆ ಆಗಮಿಸಿದಾಗ ಕೆಲವು ಕಿಡಿಗೇಡಿಗಳು ಹಿಂದೆ ಬರುತ್ತಿದ್ದ ಎಎಪಿ ಪಕ್ಷಕ್ಕೆ ಸೇರಿದ ವಾಹನವೊಂದಕ್ಕೆ ಕಲ್ಲುತೂರಿ, ದೊಣ್ಣೆಯಿಂದ ಹೊಡೆದು ಕಾರಿನ ಗಾಜುಗಳನ್ನು ಪುಡಿಪುಡಿ ಮಾಡಿದ ಘಟನೆ ನಡೆದಿದೆ. ಪ್ರಕರಣದ ಬಗ್ಗೆ ಹಾರೋಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು ಕಿಡಿಗೇಡಿಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ.
ಸಮರ್ಪಕವಾಗಿ ಕಾರ್ಯನಿರ್ವಹಿಸಿ: ಅಧಿಕಾರಿಗಳಿಗೆ ಕರೆ
ಮಾಗಡಿ: ಚುನಾವಣೆ ಹೊಣೆ ಹೊತ್ತಿರುವ ಅಧಿಕಾರಿಗಳು ಪಕ್ಷಾತೀತ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಶೈಲಜಾ ತಿಳಿಸಿದರು. ಅವರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣೆಗೆ ನೇಮಕಗೊಂಡಿರುವ ಮತಗಟ್ಟೆ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಮತಯಂತ್ರ ಬಳಕೆ ಹಾಗೂ ಅದರ ಲೋಪದೋಷ ಸರಿಪಡಿಸುವಿಕೆ, ಯಂತ್ರವನ್ನು ಬಿಚ್ಚುವುದು, ಸೀಲ್ ಮಾಡುವ ಕುರಿತು ತರಬೇತಿ ಕಾರ್ಯಗಾರದಲ್ಲಿ ಮಾತನಾಡಿ, ಚುನಾವಣೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಸಹನೆಯಿಂದ ವರ್ತಿಸಿ ಚುನಾವಣಾ ಯಶಸ್ಸಿಗೆ ಪೂರಕವಾದ ಅಂಶಗಳನ್ನು ಮತದಾರರಿಗೆ ತಿಳಿಸಬೇಕು ಎಂದರು. ಮತಯಂತ್ರಗಳ ವಿಶೇಷ ತರಬೇತುದಾರ ಜಗದೀಶ್ ನಡುವಿನ ಮಠ ಮಾತನಾಡಿ ಪ್ರತಿಯೊಬ್ಬ ಮತದಾರ ತಮ್ಮ ಅಮೂಲ್ಯವಾದ ಮತದಾನವನ್ನು ನಿರ್ಭಯವಾಗಿ ಚಲಾಯಿಸುವ ಮೂಲಕ ಶೇ.100 ರಷ್ಟು ಮತದಾನ ನಡೆಯಬೇಕು ಎಂದರು.
ಇಂದು ಸುಸ್ವರ ಸಂಗೀತ ಕಾರ್ಯಕ್ರಮ
ದೊಡ್ಡಬಳ್ಳಾಪುರ: ಇಲ್ಲಿನ ಸುಸ್ವರ ಟ್ರಸ್ಟ್ ವತಿಯಿಂದ ಸಂಗೀತ ಕಾರ್ಯಕ್ರಮ ಮಾ.30ರ ಸಂಜೆ 6.30ಕ್ಕೆ ಚೌಡೇಶ್ವರಿಗುಡಿ ಬೀದಿಯಲ್ಲಿರುವ ದೇವಾಂಗ ಮಂಡಲಿ ಕಲ್ಯಾಣ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿದುಷಿ ಅಂಜಲಿ ಶ್ರೀರಾಂ ಅವರ ಹಾಡುಗಾರಿಕೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

