'ಎಚ್.ಡಿ.ಕುಮಾರಸ್ವಾಮಿ ಪಲಾಯನವಾದಿಯಲ್ಲ'
ಆನೇಕಲು: ರಾಜ್ಯ ಕಂಡ ಉತ್ತಮ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಕುಮಾರಸ್ವಾಮಿ ರಣಧೀರರಾಗಿದ್ದಾರೆಯೇ ಹೊರತು ರಣ ಹೇಡಿಯಲ್ಲ ಎಂದು ರಾಜ್ಯ ಜೆಡಿಎಸ್ ಎಸ್ಸಿ - ಎಸ್ಟಿ ಮುಖಂಡ ಅತ್ತಿಬೆಲೆ ರವಿ ತಿಳಿಸಿದ್ದಾರೆ.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕುಮಾರಸ್ವಾಮಿ ಪಲಾಯನಸೂತ್ರ ಅನುಸರಿಸಿಲ್ಲ. ತವರು ಜಿಲ್ಲೆ ರಾಮನಗರದ ಜೊತೆಗೆ ಚಿಕ್ಕಬಳ್ಳಾವುರದಲ್ಲಿನ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಅಭ್ಯರ್ಥಿಯಾಗಿದ್ದಾರೆ. ಅವರ ರಾಜಕೀಯ ತಂತ್ರಗಾರಿಕೆ, ಇಚ್ಛಾಶಕ್ತಿ ಹಾಗೂ ಮುತ್ಸದ್ದಿತನ ಎಲ್ಲರೂ ಮೆಚ್ಚುವಂತಹುದು ಎಂದರು. ಸಂಸದರಾಗಿದ್ದ ಅವಧಿಯಲ್ಲಿ ರಾಮನಗರ ಜಿಲ್ಲೆ ಹಾಗೂ ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅಭಿವೃದ್ಧಿಗೆ ಅನುದಾನ ನೀಡಿದ್ದರು. ಮೂರನೇ ರಂಗ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಎಲ್ಲ ಲಕ್ಷಣಗಳಿದ್ದು ದೇವೇಗೌಡರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಅಷ್ಟೆ ಅಲ್ಲ ಕೇಂದ್ರದಲ್ಲಿ ಪಾಲುದಾರ ಪಕ್ಷವಾಗಿ ರಾಜ್ಯದ ಕ್ಷಿಪ್ರ ಗತಿಯ ಅಭಿವೃದ್ಧಿಗೆ ನಾಂದಿ ಹಾಡಲಿದ್ದಾರೆ ಎಂದರು. ಕುಣಿಗಲ್, ಮಾಗಡಿ, ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ ತಾಲೂಕಿನಲ್ಲಿ ಜೆಡಿಎಸ್ಗೆ ಉತ್ತಮ ನೆಲೆಗಟ್ಟು ಹಾಗೂ ಪ್ರಾಮಾಣಿಕ ಕಾರ್ಯಕರ್ತರಿದ್ದು ಅಭ್ಯರ್ಥಿ ಪ್ರಭಾಕರರೆಡ್ಡಿ ಗೆಲವು ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಗೋಷ್ಠಿಯಲ್ಲಿ ಸ್ಥಳೀಯ ನಾಯಕರಾದ ಸುರೇಶ್, ನಾರಾಯಣಸ್ವಾಮಿ, ಮುನಿರಾಜು, ರವಿರೆಡ್ಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

