ಮಾನವತಾವಾದಿ ಬಸವಣ್ಣ
ಕನ್ನಡಪ್ರಭ ವಾರ್ತೆ, ಕನಕಪುರ, ಮೇ 2
ಜಗತ್ತಿಗೆ ಸಮಾನತೆಯನ್ನು ಸಾರಿದ, ಕಂದಾಚಾರ ಮೂಢನಂಬಿಕೆಗಳನ್ನು ಧಿಕ್ಕರಿಸಿದ, ಮಹಿಳೆಯರಿಗೂ ಸಮಾನ ಅವಕಾಶ ನೀಡಿದ, ಕಾಯಕ ತತ್ವದ ಮೂಲಕ ಸ್ವಪರಿಪೂರ್ಣತೆಯನ್ನು ಬಿಂಬಿಸಿದ ಮಹಾನ್ ಮಾನವತಾವಾದಿ ಬಸವಣ್ಣನವರು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಟಿ. ನಾಗೇಶ್ ಹೇಳಿದ್ದಾರೆ.
ಅವರು ಕನಕಪುರ ತಾಲೂಕು ಕಸಾಪ ಇಲ್ಲಿನ ಶಿವನಹಳ್ಳಿ ಗ್ರಾಮದ ವೀರಭದ್ರೇಶ್ವರ ದೇವಾಲಯದಲ್ಲಿ ಆಯೋಜಿಸಿದ್ದ ಬಸವೇಶ್ವರ ಜಯಂತಿಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು.
ಸಾನ್ನಿಧ್ಯವನ್ನು ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣಸ್ವಾಮೀಜಿ ವಹಿಸಿ ಆಶೀರ್ವಚನ ನೀಡಿದರು. ನಿವೃತ್ತ ಸಂಸ್ಕೃತ ಪ್ರಾಧ್ಯಪಕ ವಿದ್ವಾನ್ ಮಲ್ಲವೀರಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೊ.ವೃಷಭೇಂದ್ರಮೂರ್ತಿ ಮಾತನಾಡಿ, ಭಕ್ತಿ, ಜ್ಞಾನ, ವೈರಾಗ್ಯಗಳನ್ನು ಜಗತ್ತಿಗೆ ಸಾರಿದ ಮಹಾನ್ ಚೇತನ ಬಸವಣ್ಣನವರು ಅಸಂಗ್ರಹ, ಅಪರಿಗ್ರಹ, ಕಾಯಕ, ದಾಸೋಹ ಮೊದಲಾದ ತತ್ವಗಳ ಮೂಲಕ ಜಗತ್ತಿಗೆ ನವಸಂದೇಶ ನೀಡಿದವರು ಎಂದರು.
ಕಸಾಪ ಮಾಜಿ ಅಧ್ಯಕ್ಷ ಕೂ.ಗಿ. ಗಿರಿಯಪ್ಪ ಬಸವಣ್ಣನವರ ಜೀವನ ಚಿಂತನೆಗಳ ಬಗ್ಗೆ ಉಪನ್ಯಾಸ ನೀಡಿದರು. ತಾ.ಕಸಾಪ ಅಧ್ಯಕ್ಷ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದ ಅಂಗವಾಗಿ ಪರಶಿವಯ್ಯ, ಚನ್ನಬಸವಯ್ಯ, ವೀರಪ್ಪ ಹಾಗೂ ಡಾ.ಈರೇಗೌಡ ಅವರನ್ನು ಸನ್ಮಾನಿಸಲಾಯಿತು. ಅತಿಥಿಗಳಾಗಿ ಜಿಲ್ಲಾ ಕೋಶಾಧ್ಯಕ್ಷ ಮಹೇಶ್, ಮಾಜಿ ಅಧ್ಯಕ್ಷ ಕಾ.ಪ್ರಕಾಶ್, ಶಿವರಾಮೇಗೌಡ ಪಾಲ್ಗೊಂಡಿದ್ದರು. ವಚನಗಾಯನ, ಗೀತಗಾಯನ ಕಾರ್ಯಕ್ರಮದಲ್ಲಿ ಕಲಾವಿದರಾದ ಚಿಕ್ಕಮರಿಗೌಡ, ಚಂದ್ರಾಜ, ಚೌ.ಪು. ಸ್ವಾಮಿ, ಮಹದೇವಸ್ವಾಮಿ ವಚನ, ಗೀತೆಗಳನ್ನು ಹಾಡಿ ರಂಜಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

