ಸರಳ ವಿವಾಹಗಳಿಗೆ ಪ್ರೋತ್ಸಾಹ ಅಗತ್ಯ
ಹೊಸಕೋಟೆ: ಇಂದಿನ ಪರಿಸ್ಥಿತಿಯಲ್ಲಿ ಸರಳ ವಿವಾಹಗಳಿಗೆ ಪ್ರೋತ್ಸಾಹ ನೀಡಬೇಕಾದ್ದು ಅತ್ಯವಶ್ಯವಾಗಿದೆ ಎಂದು ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಹೇಳಿದರು.
ಅವರು ತಾಲೂಕಿನ ಸರಕಾರ್ ಗುಟ್ಟಹಳ್ಳಿಯ ಶನಿದೇವರ, ಲಕ್ಷ್ಮೀವೆಂಕಟೇಶ್ವರಸ್ವಾಮಿ ದೇವಾಲಯದ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಡಜನರು ಅದ್ಧೂರಿಯ ವಿವಾಹಗಳನ್ನು ನೆರವೇರಿಸಲು ಸಾಲದ ಮೊರೆ ಹೋಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಅನಾವಶ್ಯಕವಾದ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದರೊಂದಿಗೆ ನೆಮ್ಮದಿಯ ಜೀವನ ಸಾಗಿಸಲು ಇಂತಹ ಸಾಮೂಹಿಕ ವಿವಾಹಗಳ ಸದುಪಯೋಗಪಡಿಸಿಕೊಳ್ಳಬೇಕು. ಈ ದಿಶೆಯಲ್ಲಿ ದೇವಾಲಯದ ಆಡಳಿತ ಮಂಡಳಿ ಕಳೆದ 17 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ ಉಪಯುಕ್ತ ಕಾರ್ಯಕ್ರಮ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲು ಶ್ರಮಿಸುತ್ತಿರುವುದು ಅಭಿನಂದನಾರ್ಹ ಎಂದರು.
ಬೆಂಗಳೂರಿನ ಅಲ್ಲಾಳಸಂದ್ರದ ಚಿಕ್ಕಮುನಿಯಪ್ಪಾಜಿ ಸ್ವಾಮೀಜಿ ಮಾತನಾಡಿ ಇದುವರೆವಿಗೂ 121 ಸಾಮೂಹಿಕ ವಿವಾಹಗಳನ್ನು ದಾನಿಗಳ ಸಹಕಾರದಿಂದ ನೆರವೇರಿಸಲಾಗಿದೆ. ಸಮಾಜದಲ್ಲಿ ಜನರಲ್ಲಿರುವ ಕೀಳರಿಮೆಯ ಪರಿಣಾಮದಿಂದಾಗಿ ಸಾಮೂಹಿಕ ವಿವಾಹಗಳಲ್ಲಿ ಪಾಲ್ಗೊಳ್ಳಲು ಹಿಂಜರಿಯುತ್ತಿರುವುದು ದುರದೃಷ್ಟಕರ. ಈ ಬಗ್ಗೆ ತಿಳಿವಳಿಕೆ ನೀಡುವಲ್ಲಿ ಸಂಘ ಸಂಸ್ಥೆಗಳು ಸಕ್ರಿಯ ಪಾತ್ರ ವಹಿಸಬೇಕಾಗಿದೆ ಎಂದರು. ಸಾಮಾಹಿಕ ವಿವಾಹದಲ್ಲಿ ಭಾಗವಹಿಸಿದ್ದ 7 ವಧು-ವರರಿಗೆ ಗೊರವಿಗೆರೆಯ ಸುಶೀಲಮ್ಮ , ಲಕ್ಷ್ಮಯ್ಯ ಬಟ್ಟೆ, ಮಾಂಗಲ್ಯ ನೀಡಿದರು. ಟಿಎಪಿಸಿಎಂಎಸ್ ಅಧ್ಯಕ್ಷ ಟಿ. ಸೊಣ್ಣಪ್ಪ, ಉದ್ಯಮಿ ಬಿ.ವಿ. ಬೈರೇಗೌಡ, ದೊಡ್ಡಗಟ್ಟಿಗನಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಾಮಿನಿ ಕಾಮರಾಜ್, ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಮುಖಂಡರಾದ ಬಿ.ವಿ. ಬೈರೇಗೌಡ, ಸಿ.ಮುನಿಯಪ್ಪ, ಎಚ್.ಎಂ.ಸುಬ್ಬರಾಜು, ವಿ. ವಿಜಯಕುಮಾರ್, ಎಸ್. ನಾಗರಾಜ್, ಪ್ರಧಾನ ಅರ್ಚಕ ರಾಮದಾಸ್ ಸ್ವಾಮೀಜಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

