ಭಗೀರಥ ಜಯಂತ್ಯುತ್ಸವ
ದೊಡ್ಡಬಳ್ಳಾಪುರ: ಇಲ್ಲಿನ ದೊಡ್ಡಬಳ್ಳಾಪುರ ತಾಲೂಕು ಭಗೀರಥ ಉಪ್ಪಾರ ಸಂಘದ ನೇತೃತ್ವದಲ್ಲಿ ಭಗೀರಥ ಜಯಂತ್ಯುತ್ಸವ ಕಾರ್ಯಕ್ರಮ ತಾಲೂಕಿನ ಪಾಲನಜೋಗಿಹಳ್ಳಿ ಬಡಾವಣೆಯಲ್ಲಿ ಮಂಗಳವಾರ ಬೆಳಗ್ಗೆ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಂಘದ ಮುಖಂಡರು, ಬರದ ನಾಡಿಗೆ ಭಗೀರಥ ಪ್ರಯತ್ನದಿಂದ ನೀರು ಬಂತು. ಪೌರಾಣಿಕ ಹಿನ್ನೆಲೆಯಲ್ಲಿ ಭೂಮಿಗೆ ಗಂಗೆಯನ್ನು ತಂದ ಸಾರ್ಥಕ ವ್ಯಕ್ತಿತ್ವವಾಗಿ ಭಗೀರಥ ಕಾಣುತ್ತಾನೆ. ಆತನ ತಪ ನಿಷ್ಠೆ ಮತ್ತು ಲೋಕಕಲ್ಯಾಣದ ಮಹತ್ವದ ಕಳಕಳಿ ಎಲ್ಲರಿಗೂ ಅನುಕರಣೀಯ. ಗಂಗಾವತರಣಕ್ಕೆ ತನ್ನನ್ನೇ ಅರ್ಪಿಸಿಕೊಳ್ಳುವ ಮೂಲಕ ಜಗತ್ತಿನ ಉದ್ಧಾರ ಬಯಸಿದ ಭಗೀರಥ ಆಧುನಿಕ ಸಂದರ್ಭದಲ್ಲಿ ಬಹುಮುಖ್ಯವಾಗಿ ಚರ್ಚೆಗೊಳಗಾಗಬೇಕಾದ ವ್ಯಕ್ತಿ. ಸ್ವಾರ್ಥ, ಸ್ವಹಿತ ಸಾಧನೆಗಳೇ ಮೂಲವಾಗಿರುವ ಇಂದಿನ ಸಮಾಜಕ್ಕೆ ಭಗೀರಥ ಮೌಲ್ಯಗಳ ಅಳವಡಿಕೆ ಅಗತ್ಯವಾಗಿದೆ. ಆಗ ಮಾತ್ರ ಬದಲಾವಣೆ ನಿರೀಕ್ಷಿತ ಎಂದರು. ದೊಡ್ಡಬಳ್ಳಾಪುರ ತಾಲೂಕು ಭಗೀರಥ ಉಪ್ಪಾರ ಸಂಘದ ಮುಖಂಡರು, ಕಾರ್ಯಕರ್ತರು ಮತ್ತು ಪದಾಧಿಕಾರಿಗಳು, ಮುಖಂಡರು ಭಾಗವಹಿಸಿದ್ದರು.
'ಮೌಲ್ಯಗಳ ರಕ್ಷಣೆ ಅಗತ್ಯ'
ದೊಡ್ಡಬಳ್ಳಾಪುರ: ಸಾಂವಿಧಾನಿಕ ಮೌಲ್ಯಗಳ ರಕ್ಷಣೆ ಅಗತ್ಯವಾಗಿದ್ದು, ಅದನ್ನು ನಮ್ಮ ಬದುಕಿನಲ್ಲಿ ಮೈಗೂಡಿಸಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ತಾಲೂಕಿನ ಹಣಬೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂಬೇಡ್ಕರ್ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಹುಜಾತಿಯ ಮತ್ತು ಬಹು ಭಾಷಿಕ ಸಂಸ್ಕೃತಿಯ ದೇಶಕ್ಕೆ ಬೇಕಾದ ವೈಜ್ಞಾನಿಕ ರೀತಿಯ ಸಂವಿಧಾನವನ್ನು ಅಂಬೇಡ್ಕರ್ ನಮಗೆ ಕೊಟ್ಟಿದ್ದಾರೆ. ನಮ್ಮಲ್ಲಿರುವ ಮೇಲು-ಕೀಳು ಭಾವನೆಗಳನ್ನು ಬಿಟ್ಟು ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಪ್ರಚೋದಿಸಬೇಕು.ಸರ್ಕಾರದ ಸವಲತ್ತುಗಳನ್ನು ಪ್ರತಿಯೊಬ್ಬರು ಸಮಾನವಾಗಿ ಬಳಕೆ ಮಾಡಿಕೊಳ್ಳಲು ಅರಿವು ಮೂಡಿಸಬೇಕು. ದಲಿತರು ಶಿಕ್ಷಣದಿಂದ ವಂಚಿತರಾಗಬಾರದು ಎಂದರು. ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ ಮಾತನಾಡಿ, ದೇಶದಲ್ಲಿ ಬಡತನ ನಿರ್ಮೂಲನೆ ಆದಾಗ ಮಾತ್ರ ಅಭಿವೃದ್ಧಿ ಸಾದ್ಯ. ದಲಿತವರ್ಗ ವಿದ್ಯಾವಂತರಾಗಬೇಕು. ಜಾತಿ ಹೆಸರಲ್ಲಿ ನಡೆಯುತ್ತಿರುವ ಅಸಮಾನತೆ ದೂರವಾಗಬೇಕು. ಮನುಷ್ಯತ್ವದ ಚಿಂತನೆಗಳು ಪ್ರತಿಯೊಬ್ಬರಲ್ಲೂ ಮೂಡಿಬರಬೇಕು. ಆಗ ಮಾತ್ರ ಅಂಬೇಡ್ಕರ್ರ ಚಿಂತನೆ ಅರ್ಥಪೂರ್ಣ ಅನುಷ್ಠಾನವಾದಂತಾಗುತ್ತದೆ ಎಂದರು. ಕೊಂಗಾಡಿಯಪ್ಪ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಚಂದ್ರಪ್ಪ, ಪ್ರೊ.ರಂಗಸ್ವಾಮಿ ಬೆಳಕವಾಡಿ ಮತ್ತಿತರರು ಮಾತನಾಡಿದರು. ಶ್ರೀವತ್ಸ, ರವಿಕುಮಾರ್, ಮಲ್ಲರಾಜು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

