ಬೆಂಗಳೂರು ಗ್ರಾಮಾಂತರ

ರಾಮದೇವ್ ಗಡಿಪಾರು ಮಾಡಿ

Published On :

ಕನಕಪುರ: ಅವಹೇಳನಕಾರಿ ಹೇಳಿಕೆಗಳ ಮೂಲಕ ದಲಿತ ಸಮುದಾಯಕ್ಕೆ ಅವಮಾನ ಮಾಡಿರುವ ಯೋಗಗುರು ಬಾಬಾ ರಾಮದೇವ್ ಅವರನ್ನು ಗಡೀಪಾರು ಮಾಡಬೇಕೆಂದು ಒತ್ತಾಯಿಸಿ ಕನಕಪುರ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು. ಪಟ್ಟಣ ಪ್ರಮುಖ ಬೀದಿಗಳಲ್ಲಿ ರಾಂದೇವವ್ವಿರುದ್ಧವಾಗಿ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು. ಇಲ್ಲಿನ ಚನ್ನಬಸಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ದಲಿತ ಒಕ್ಕೂಟಗಳ ಅಧ್ಯಕ್ಷ ರಾಂಪುರ ನಾಗೇಶ್ ಮಾತನಾಡಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ದಲಿತರ ಮನೆಗಳಿಗೆ ಮಧುಚಂದ್ರದ ಅನುಭವ ಪಡೆಯಲು ಹೋಗುತ್ತಾರೆ ಎಂಬ ಅಸಂಬದ್ಧ, ಬಾಲಿಷ ಹೇಳಿಕೆಗಳನ್ನು ನೀಡಿರುವುದು, ದೇಶದಲ್ಲಿನ ಹಿಂದೂ ಸಮುದಾಯದ ಭಾವೈಕ್ಯತೆಯನ್ನು ಒಡೆದು ಕೋಮುಗಲಭೆಗಳನ್ನು ಸೃಷ್ಟಿಸುವ ಹುನ್ನಾರವಿದೆ. ಇಂಥ ವಿದ್ವಂಸಕ ಹೇಳಿಕೆಗಳನ್ನು ನೀಡುತ್ತಿರುವ ಬೇಜವಾಬ್ದಾರಿ ವ್ಯಕ್ತಿ ಬಾಬಾರನ್ನು ದೇಶದಿಂದಲೇ ಗಡೀಪಾರು ಮಾಡಬೇಕು, ಎಂದು ರಾಂಪುರ ನಾಗೇಶ್ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪ್ರಜಾಪರಿವರ್ತನಾ ವೇದಿಕೆ ಅಧ್ಯಕ್ಷ ಜೆ.ಎಂ.ಶಿವಲಿಂಗಯ್ಯ, ದಲಿತ ಮುಖಂಡರಾದ ರಾಜಗೋಪಾಲ, ರಮೇಶ್, ರುದ್ರೇಶ್, ಸೋಮಣ್ಣ, ತುಂಗಣಿ ಉಮೇಶ್, ಶಿವಕುಮಾರ್, ಗುರುಮೂರ್ತಿ, ಕುಮಾರ್, ಚೌಡಯ್ಯ, ಪ್ರಸಾದ್ ಪಾಲ್ಗೊಂಡಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.