ಬೆಂಗಳೂರು ಗ್ರಾಮಾಂತರ

ಜಿಲ್ಲಾದ್ಯಂತ ಶತಮಾನೋತ್ಸವ

Published On :

ವಿಜಯಪುರ: ಪಟ್ಟಣದ ಗಂಗಾದೇವಿ ದೇವಾಲಯದ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಂಸ್ಥಾಪನ ಶತಮಾನೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಬೆ.ಗ್ರಾ.ಜಿ ಕಸಾಪ ಅಧ್ಯಕ್ಷ ಹುಲಿಕಲ್ ನಟರಾಜ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಶತಮಾನೋತ್ಸವ ರಥ ಎಲ್ಲೆಡೆ ಹರಿದಾಡಲಿದೆ. ಪ್ರತಿ
ತಾಲೂಕಿನಲ್ಲಿ ಸಮರ್ಪಕ ರೀತಿಯಲ್ಲಿ ಕಾರ್ಯಕ್ರಮವು ನಡೆಯಲಿದೆ. ವರ್ಷಾಚರಣೆ ಕಾರ್ಯಕ್ರಮದಲ್ಲಿ ದೇವನಹಳ್ಳಿ ತಾಲೂಕಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದು, 5ಲಕ್ಷ ವಿನಿಯೋಗಿಸಲು ಯೋಚಿಸಲಾಗಿದೆ ಎಂದು ತಿಳಿಸಿದರು.
ನಿಕಟ ಪೂರ್ವ ಅಧ್ಯಕ್ಷ ಸುಧಾಕರ್ ಮಾತನಾಡಿ, ಪ್ರತಿ ಗ್ರಾಮ, ಪಟ್ಟಣ ಹಾಗೂ ನಗರಗಳಲ್ಲಿ ಜಾನಪದ ಕಲೆಯ ಸೊಗಡನ್ನು ಅರಿತ ಕಲಾವಿದರಿದ್ದು ಅಂತಹವರನ್ನು ಗುರುತಿಸಿ ಪ್ರೋತ್ಸಾಹಿಸುವುದರಿಂದ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ ಎಂದರು. ತಾಲೂಕು ಕಸಾಪ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಹಡಪದ್, ತಾಲೂಕು ಅಧ್ಯಕ್ಷ ರಾಜ್ ಗೋಪಾಲ್, ಟೌನ್ ಅಧ್ಯಕ್ಷ
ಮುನಿವೀರಣ್ಣ, ತಾಲೂಕು ಕಾರ್ಯದರ್ಶಿ ವಿ.ಎನ್. ರಮೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಾಲೂಕು ಪರಿಷತ್ ಸಂಸ್ಥಾಪನ ಕಾರ್ಯದರ್ಶಿ ವಿಜಯರಾಜು, ಕೋಶಾಧ್ಯಕ್ಷ ಎಂ. ಗಿರಿರಾಜ್ ಅವರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.