ನಿಷ್ಠೆಯಿಂದ ಅಧ್ಯಯನ ನಡೆಸಿ: ಹಂಸಲೇಖ
ರಾಮನಗರ: ಸಮಾಜದಲ್ಲಿ ಗೌರವಯುತವಾಗಿ ಬದಕಲು ಪದವಿ ಅತ್ಯಗತ್ಯ. ಅವರನ್ನು ಪಡೆಯಲು ನಿಷ್ಠೆಯಿಂದ ಅಧ್ಯಯನ ನಡೆಸಿದಾಗ ಮಾತ್ರ ಯಶಸ್ಸು ಗಳಿಸಬಹುದು ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಬಿಜಿಎಸ್ ಅಂಧರ ಶಾಲೆಯಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜನ ಜಾಗೃತಿ ಶಿಬಿರದಲ್ಲಿ ರಾಜ್ಯದಾದ್ಯಂತ ಆಗಮಿಸಿರುವ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ನಿರ್ದಿಷ್ಟ ಗುರಿ ಇರಿಸಿಕೊಂಡು ಸತತ ಪ್ರಯತ್ನ ಪಟ್ಟರೆ ಮಾತ್ರ ಪ್ರತಿಭೆ ಹೊರಹೊಮ್ಮಲು ಸಾಧ್ಯ ಎಂದರು.
ಪ್ರತಿ ವ್ಯಕ್ತಿಯಲ್ಲೂ ಸಂಗೀತ ಸೇರಿದಂತೆ ವಿವಿಧ ಕಲೆಗಳು, ಕ್ರೀಡೆಗಳು ಹೀಗೆ ತಮ್ಮದೇ ಆಸಕ್ತಿಯ ವಿಷಯವಿರುತ್ತದೆ. ಅದು ಪ್ರತಿಭೆಯಾಗಿ ಹೊರಹೊಮ್ಮಲು ಸೂಕ್ತ ತರಬೇತಿ ಅತಿ ಮುಖ್ಯ. ಕೀಳರಿಮೆ ತೊರೆದು ಶಿಸ್ತು ಮೈಗೂಡಿಸಿಕೊಳ್ಳಬೇಕು ಎಂದು ಹಂಸಲೇಖ ಕರೆ ನೀಡಿದರು. ಜಾಗತೀಕರಣ, ಕೈಗಾರೀಕರಣದ ಹೆಸರಿನಲ್ಲಿ ಅರಣ್ಯ ನಾಶ ಮಾಡುತ್ತಿದ್ದೇವೆ. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳದಿದ್ದರೆ ಮಾನವ ಜನಾಂಗಕ್ಕೆ ಉಳಿಗಾಲವಿಲ್ಲ. ಪ್ರತಿಯೊಬ್ಬರೂ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಾಗಬೇಕು. ದೈವಾದೀನರಾಗಿರುವ ಶ್ರೀಬಾಲಗಂಗಾಧರನಾಥ ಸ್ವಾಮೀಜಿಯವರು 5 ಕೋಟಿ ಸಸಿಗಳನ್ನು ನೆಟ್ಟು ಅರಣ್ಯವನ್ನು ಬೆಳೆಸುವ ಕಾರ್ಯ ಕೈಗೊಂಡಿದ್ದರು. ಅದನ್ನು ನಾವು ಮುಂದುವರಿಸಬೇಕು ಎಂದು ಮಂಗಳ ಶಿಕ್ಷಣ ಸಮಿತಿಯ ಮುಖ್ಯಸ್ಥ ಬೈರಪ್ಪ ಹೇಳಿದರು.
ಆದಿ ಚುಂಚನಗಿರಿಯ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಬಿಜೆಪಿ ಮುಖಂಡ ಗಿರೀಶ್ ಮಟ್ಟಣನವರ್, ರಾಮನಗರ ಶಾಖಾ ಮಠದ ಕಾರ್ಯದರ್ಶಿ ಅನ್ನದಾನೇಶ್ವರ ಸ್ವಾಮೀಜಿ ಹಾಜರಿದ್ದರು. ಇದೇ ವೇಳೆ ಸಂಗೀತ ನಿರ್ದೇಶಕ ಹಂಸಲೇಖ ಹಾಡು ಹಾಡಿ ರಂಜಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

