ಬೆಂಗಳೂರು ಗ್ರಾಮಾಂತರ

ರಾಮದೇವ್ ಹೇಳಿಕೆಗೆ ಖಂಡನೆ

Published On :

ಹೊಸಕೋಟೆ: ದಲಿತ ಮಹಿಯರ ಬಗ್ಗೆ ಬಾಬಾ ರಾಮದೇವ್ ನೀಡಿರುವ ಹೇಳಿಕೆಯನ್ನು ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದ ತಾಲೂಕು ಸಚಾಲಕ ಆರ್.ಎನ್. ನಾರಾಯಣಪ್ಪ ಖಂಡಿಸಿದ್ದಾರೆ.
ಮೇ 10ಕ್ಕೆ ವಿದ್ಯುತ್ ಇಲ್ಲ
ಬೆಂಗಳೂರು: ಹೊಸಕೋಟೆ ತಾಲೂಕಿನ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಮೇ 10ರ ಮಧ್ಯಾಹ್ನ 12 ರಿಂದ ಸಾಯಂಕಾಲ 4 ಗಂಟೆಯವರಿಗೆ ವಿದ್ಯುತ್ ಸ್ಥಗಿತಗೊಳಿಸಲಾಗುತ್ತದೆ. ಅವಲಹಳ್ಳಿ ಕೈಗಾರಿಕಪ್ರದೇಶ, ನಲ್ಲೂರು ವೀರಹಳ್ಳಿ, ಬಂಡಾಪುರ, ಬಿದರಹಳ್ಳಿ ಮತ್ತು ಪಾಲನ ಘಟಕದ ಸಾಯಿಗಾರ್ಡನ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ ಅದಾಲತ್ ಕಾರ್ಯಕ್ರಮ
ರಾಮನಗರ: ಸಾರ್ವಜನಿಕ ಶಿಕ್ಷಣ ಇಲಾಖೆ 2013-14ನೇ ಸಾಲಿನ ಜಿಲ್ಲಾ ಹಂತದ ಶಿಕ್ಷಣ ಅದಾಲತ್ ಕಾರ್ಯಕ್ರಮವನ್ನು ಮೇ 13 ರಂದು ನಗರದ ಗುರುಭವನದಲ್ಲಿ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಆಯುಕ್ತರು ಭಾಗವಹಿಸಿ ಕಡತಗಳನ್ನು ವಿಲೇವಾರಿ ಮಾಡುವುದಲ್ಲದೆ, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವರು. ಶಿಕ್ಷಕರು ಮತ್ತು ಪೋಷಕರು ತಮ್ಮ ಅಹವಾಲುಗಳನ್ನು ಲಿಖಿತವಾಗಿ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸಲ್ಲಿಸಬೇಕು. ಅದಾಲತ್ ನಡೆಯುವ ದಿನದಂದು ತಾವು ಸಲ್ಲಿಸಿರುವ ದೂರಿನ ಪ್ರತಿಯೊಂದಿಗೆ ಹಾಜರಾಗಬೇಕು ಎಂದು ಡಿಡಿಪಿಐ ಪ್ರಹ್ಲಾದಗೌಡ ತಿಳಿಸಿದ್ದಾರೆ.
ವೃದ್ಧ ಕಾಣೆ
ರಾಮನಗರ: ಚನ್ನಪಟ್ಟಣ ತಾಲೂಕಿನ ಮೈಲನಾಯ್ಕನಹಳ್ಳಿ ಗ್ರಾಮದ ಗಂಗಾಧರ್ ಎಂಬುವರ ತಂದೆ 65 ವರ್ಷದ ಪುಟ್ಟಸ್ವಾಮಯ್ಯ ಕಳೆದ ಏ.22ರಿಂದ ಕಾಣೆಯಾಗಿದ್ದಾರೆ. ಚನ್ನಪಟ್ಟಣಕ್ಕೆ ಹೋಗಿ ಬರುವುದಾಗಿ ಹೋದವರು ಮತ್ತೆ ಮನೆಗೆ ಬಂದಿಲ್ಲ ಎಂದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ, ಕೋಲು ಮುಖ ಹೊಂದಿರುವ ಪುಟ್ಟಸ್ವಾಮಯ್ಯ ಕನ್ನಡ ಭಾಷೆ ಮಾತ್ರ ಮಾತನಾಡುತ್ತಾರೆ. ಈ ವ್ಯಕ್ತಿಯ ಸುಳಿವು ದೊರೆತಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.