ಬೆಂಗಳೂರು ಗ್ರಾಮಾಂತರ

ಜಿಲ್ಲೆಗೆ ಪ್ರಥಮ ಗಳಿಸಿದ ವಿದ್ಯಾರ್ಥಿಗಳು

Published On :

ರಾಮನಗರ: ದ್ವಿತೀಯ ಪಿಯುಸಿ ಪರೀಕ್ಷೆಯ ಕಲಾ ವಿಭಾಗದಲ್ಲಿ ಮರಳೇಗವಿಮಠದ ಎಸ್ಎಸ್ಎಂಎಸ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಎಸ್. ಶ್ರೀಕಾಂತ್, ವಿಜ್ಞಾನ ವಿಭಾಗದಲ್ಲಿ ರಾಮನಗರದ ಶಾಂತಿನಿಕೇತನ ಪದವಿ ಪೂರ್ವ ಕಾಲೇಜಿನ ಕೆ.ಎಸ್. ಮಹೇಶಕುಮಾರ್, ವಾಣಿಜ್ಯ ವಿಭಾಗದಲ್ಲಿ ಚನ್ನಪಟ್ಟಣದ ಸೇಂಟ್ ಆನ್ಸ್ಪ್ದವಿ ಪೂರ್ವ ಕಾಲೇಜಿನ ಎಂ.ಜಿ. ವರ್ಷಿಣಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಶ್ರೀಕಾಂತ್ 528(ಶೇ.88) ಅಂಕಗಳನ್ನು ಪಡೆದಿದ್ದರೆ, ಮಹೇಶಕುಮಾರ್ 576(ಶೇ.86) ಮತ್ತು ವರ್ಷಿಣಿ 583(ಶೇ.97.16) ಅಂಕಗಳನ್ನು ಗಳಿಸಿದ್ದಾರೆ ಎಂದು ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಡಿ. ಲಿಂಗರಾಜು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದ್ವಿತೀಯ, ತೃಯ ಸ್ಥಾನಿಗಳು: ಕಲಾ ವಿಭಾಗದಲ್ಲಿ ಚನ್ನಪಟ್ಟಣದ ಅರಳಾಳುಸಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿ.ಎಂ. ಹೇಮಂತಕುಮಾರ್ 525(ಶೇ.87.5) ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಚನ್ನಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಎಸ್. ಸಾಗರ್ 522(ಶೇ.87) ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಮಾಗಡಿಯ ಬಿಜಿಎಸ್ ಪದವಿ ಪೂರ್ವ ಕಾಲೇಜಿನ ಎಂ.ಎಸ್. ಕಾವ್ಯ 579(ಶೇ.96.5) ಅಂಕಗಳೊಂದಿಗೆ 2ನೇ ಸ್ಥಾನ ಪಡೆದಿದ್ದರೆ, ಅದೇ ಕಾಲೇಜಿನ ಕಾವ್ಯಶ್ರೀ 572(ಶೇ.895.33) ಅಂಕಗಳನ್ನು ಪಡೆಯುವ ಮೂಲಕ 3ನೇ ಸ್ಥಾನ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಚನ್ನಪಟ್ಟಣದ ಸೇಂಟ್ ಆನ್ಸ್ ಪದವಿ ಪೂರ್ವ ಕಾಲೇಜಿನ ವಿ.ಎಸ್. ಕವನ 572(ಶೇ.95.33) ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು, ಮಾಗಡಿಯ ಬಿಜಿಎಸ್ಪ್ದವಿ ಪೂರ್ವ ಕಾಲೇಜಿನ ಕೆ. ಚೈತ್ರ 571(ಶೇ.95.16) ತೃತೀಯ ಸ್ಥಾನ ಪಡೆದಿದ್ದಾರೆ.  
ಶೇಕಡ 100 ಫಲಿತಾಂಶ: ಈ ಜಿಲ್ಲೆಯಲ್ಲಿ ಶೇಕಡ 100ರಷ್ಟು ಫಲಿತಾಂಶ ಪಡೆದ ಎರಡೂ ಕಾಲೇಜುಗಳು ಗ್ರಾಮಾಂತರ ಪ್ರದೇಶದವು ಎನ್ನುವುದು ವಿಶೇಷ. ರಾಮನಗರ ತಾಲೂಕಿನ ಸುಗ್ಗನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಮಾಗಡಿ ತಾಲೂಕಿನ ಮಾಡಬಾಳು ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 100ರಷ್ಟು ಫಲಿತಾಂಶ ಪಡೆದುಕೊಂಡಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.