ಬೆಂಗಳೂರು ಗ್ರಾಮಾಂತರ

ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿದವರಿಗೆ ಅಭಿನಂದನೆ

Published On :

ನೆಲಮಂಗಲ: ಪಿಯು ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಶೇ.64.74 ಫಲಿತಾಂಶ ಪಡೆದು ರಾಜ್ಯದಲ್ಲಿ 9ನೇ ಸ್ಥಾನ ಪಡೆಯಲು ಶ್ರಮಿಸಿದ ಎಲ್ಲಾ ಕಾಲೇಜಿನ ಸಿಬ್ಬಂದಿಗೆ ಪಿಯು ಇಲಾಖೆ ಉಪನಿರ್ದೇಶಕಿ ಎನ್. ಸಾವಿತ್ರಿ ಅಭಿನಂದಿಸಿದ್ದಾರೆ.
ತಾಲ್ಲೂಕಿನ ಯಂಟಗಾನಹಳ್ಳಿ ಸರ್ಕಾರಿ ಕಾಲೇಜಿನ ವಿಜ್ಞಾನ ವಿಭಾಗದ ಭೌತಶಾಸ್ತ್ರ, ರಾಸಾಯನಶಾಸ್ತ್ರ, ಜೀವಶಾಸ್ತ್ರ ಶೇ.100, ಗಣಿತ ಶೇ.80 ಫಲಿತಾಂಶ ಪಡೆದಿದೆ. ವಾಣಿಜ್ಯ ವಿಭಾಗ ಶೇ.98.8 ಪಡೆದರೆ ಲೆಕ್ಕಶಾಸ್ತ್ರ ಮತ್ತು ವ್ಯವಹಾರ ಅಧ್ಯಯನದಲ್ಲಿ ಐವರು 100 ಅಂಕ ಪಡೆದಿದ್ದಾರೆ. ತಬಸ್ಮುತಾಜ್  (541), ಅನಿತಾ (536), ಎಚ್.ವಿ. ಮಂಜುಳಾ(530), ಮುನಿರಾಜು (523), ಗುರುಮೂರ್ತಿ (521) ಉನ್ನತ ಶ್ರೇಣಿಯಲ್ಲಿ, 31 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿ ಒಟ್ಟು ಫಲಿತಾಂಶ ಶೇ.89 ಗಳಿಸಿ ಸರ್ಕಾರಿ ಕಾಲೇಜುಗಳಲ್ಲಿ ಪ್ರಥಮ ಸ್ಥಾನ ಪಡೆದು ಗ್ರಾಮಾಂತರ ಪ್ರದೇಶದ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜಿ. ಸಂಪತ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಪಟ್ಟಣದ ಮುರಳಿ ಕಲಾ ವಿಭಾಗದಲ್ಲಿ ಶೇ.78 ವಾಣಿಜ್ಯದಲ್ಲಿ ಶೇ.90 ಪಡೆದು ಒಟ್ಟು ಶೇ.86 ಫಲಿತಾಂಶ ಪಡೆದು ಅನುದಾನಿತ ಕಾಲೇಜುಗಳಲ್ಲಿ ಪ್ರಥಮ ಸ್ಥಾನ ಪಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.