ಗಾಂಜಾ ಸಾಗಾಟ: ವ್ಯಕ್ತಿ ಬಂಧನ
ಆನೇಕಲ್ಲು: ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ ಆನೇಕಲ್ ಪೊಲೀಸರು 2 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆನಂದ ಬಂಧಿತ ಆರೋಪಿ. ಪಟ್ಟಣದ ಜೈ ಭೀಮ್ ನಗರದ ವಾಸಿ. ಈತನ ಬಳಿ ಗಾಂಜಾ ಲಭ್ಯವಿದೆ ಎಂಬ ಮಾಹಿತಿ ಅನುಸರಿಸಿದ ಆನೇಕಲ್ ಎಸ್ಐ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿದಾಗ ಆನಂದ್ ಓಡಲು ಮುಂದಾದ. ಕೂಡಲೇ ಸಿಬ್ಬಂದಿ ಆತನನ್ನು ಬಂಧಿಸಿ ಮಾಲನ್ನು ವಶಕ್ಕೆ ಪಡೆದರು. ಬಂಧಿತ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು ಆತನಿಗೆ ಎಲ್ಲಿಂದ ಮಾದಕ ವಸ್ತು ಬಂದಿತು, ಇದರ ಹಿನ್ನೆಲೆಯನ್ನು ಅರಿಯಲು ತಂಡವನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ಫ್ರೀಡಂ ಪಾರ್ಕ್ನಿಂದ ಮೆರವಣಿಗೆ ಇಂದು
ದೇವನಹಳ್ಳಿ: ನವಯುಗ ಸಂಸ್ಥೆಯವರು ದೇವನಹಳ್ಳಿ ಟೋಲ್ ಪ್ಲಾಜಾದಿಂದ ಕೊಲಂಬಿಯ ಏಷ್ಯ ಆಸ್ಪತ್ರೆವರೆಗೆ ಸರ್ವೀಸ್ ರಸ್ತೆ ಮಾಡಿಕೊಡುವುದು ಅಲ್ಲದೆ ಟೋಲ್ ಶುಲ್ಕ ಹಿಂದೆ ಇದ್ದ ದರಕ್ಕೆ ಇಳಿಸುವುದರ ಬಗ್ಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅಯ್ಯಂಗಾರ್ ನೇತೃತ್ವದಲ್ಲಿ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಪ್ರೀಡಂ ಪಾರ್ಕ್ನಿಂದ ಮುಖ್ಯಮಂತ್ರಿಗಳ ಮನೆವರೆಗೆ ಮೆರವಣಿಗೆ ಆಯೋಜಿಸಲಾಗಿದೆ ಎಂದು ಹೋರಾಟ ಸಮಿತಿ ಸಂಚಾಲಕ ಬಿ.ಕೆ. ಶಿವಪ್ಪ ತಿಳಿಸಿದ್ದಾರೆ. ಈ ಸಂಧರ್ಭದಲ್ಲಿ ಸೂಲಿಬೆಲೆಯ ಸ್ವಾತಂತ್ರ್ಯ ಹೋರಾಟಗಾರರಾದ ಸೂ.ರಂ. ರಾಮಯ್ಯ, ದೇವನಹಳ್ಳಿ ತಾಲೂಕಿನ ವಿವಿಧ ಸಂಸ್ಥೆಗಳಕಾರ್ಯಕರ್ತರು ಭಾಗವಹಿಸಲಿದ್ದು ಮುಖ್ಯಮಂತ್ರಿಗಳಿಗೆ ಮನವಿ ನೀಡುವುದಾಗಿ ಬಿ.ಕೆ. ಶಿವಪ್ಪ ತಿಳಿಸಿದರು.
ಕಾಂಗ್ರೆಸ್ಗೆ ನೇಮಕ
ರಾಮನಗರ: ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ವೆಂಕಟಸ್ವಾಮಿ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಯ್ಯದ್ ಜಿಯಾ ಉಲ್ಲಾ ನೇಮಕ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ.ಎನ್. ವೆಂಕಟೇಶ್ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಎಸ್ಸಿಎಸ್ಟಿ ವಿಭಾಗದ ಅಧ್ಯಕ್ಷರಾಗಿದ್ದ ವೆಂಕಟಸ್ವಾಮಿ ಪಕ್ಷವನ್ನು ಸಮರ್ಥವಾಗಿ ಸಂಘಟಿಸಿದ್ದಾರೆ ಎಂದರು. ಇವರ ನೇಮಕಕ್ಕೆ ಸಮ್ಮತಿಸಿದ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್, ಸಿ.ಎಂ. ಲಿಂಗಪ್ಪ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಕೆಪಿಸಿಸಿ ಸದಸ್ಯ ಕೆ. ರಮೇಶ್ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ನೂತನ ಉಪಾಧ್ಯಕ್ಷ ವೆಂಕಟಸ್ವಾಮಿ ಮಾತನಾಡಿ, ಪಕ್ಷದ ಮುಖಂಡರು ನೀಡಿರುವ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ತಿಳಿಸಿದರು. ಗೋಷ್ಠಿಯಲ್ಲಿ ಶಿವಕುಮಾರಸ್ವಾಮಿ, ಪುಟ್ಟರಾಜು, ನರಸಿಂಹಯ್ಯ, ಶಿವಶಂಕರ್, ಉಮೇಶ್, ಬೀರೇಶ್, ಶಿವಲಿಂಗಯ್ಯ, ಸಮದ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

