ಬೆಂಗಳೂರು ಗ್ರಾಮಾಂತರ

ಕೇಂಬ್ರಿಡ್ಜ್ ಶಾಲೆಗೆ ಶೇ.97 ಫಲಿತಾಂಶ

Published On :

ಚನ್ನಪಟ್ಟಣ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಟ್ಟಣದ ಕೇಂಬ್ರಿ ಡ್ಜ್ ಪ್ರೌಢಶಾಲೆ ಶೇ.97.7 ರಷ್ಟು ಫಲಿತಾಂಶ ಪಡೆದಿದೆ. ಈ ಬಾರಿ ಪರೀಕ್ಷೆಗೆ ಕುಳಿತ್ತಿದ್ದ, 43 ಮಂದಿ ವಿದ್ಯಾರ್ಥಿಗಳ ಪೈಕಿ 7 ಮಂದಿ ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ, 26 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.  ಸರ್ಫರಾಜ್‌ಮಲ್ಲಿಕ್ 625ಕ್ಕೆ 583 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಉಳಿದಂತೆ ಮೋಹನ್ ಜಿ. 551, ಸಾಯಿ ರಜತ್ 550, ಕಾವ್ಯ ಎನ್. 542, ಪ್ರಜ್ವಲ್ 535, ಶಶಾಂಕ್ 534, ರಕ್ಷಿತ್ 533 ಅಂಕಗಳನ್ನು ಪಡೆದಿದ್ದಾರೆ.
ಉತ್ತಮ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕ ವೃಂದದವರಿಗೆ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಎಸ್.ಲಿಂಗೇಶ್‌ಕುಮಾರ್, ಟ್ರಸ್ಟಿ ಚಿತ್ರಾ ಲಿಂಗೇಶ್‌ಕುಮಾರ್,ಸತ್ಯನಾರಾಯಣ, ಶಿವಮಲ್ಲಿಕಾರ್ಜುನೇಗೌಡ, ಪ್ರಾಂಶುಪಾಲ ನಿಂಗೇಗೌಡ ಅಭಿನಂದನೆ ಸಲ್ಲಿಸಿದ್ದಾರೆ.
ಬಾಲು ಶಾಲೆ ನೂರಕ್ಕೆ ನೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ನಗರದ ಬಾಲು ಪಬ್ಲಿಕ್ ಶಾಲೆಗೆ 100ಕ್ಕೆ 100 ರಷ್ಟು ಫಲಿತಾಂಶ ದೊರೆಯುವುದರ ಮುಖಾಂತರ ಶಾಲೆಗೆ ಕೀರ್ತಿ ಲಭಿಸಿದೆ. ಪರೀಕ್ಷೆ ತೆಗೆದುಕೊಂಡಿದ್ದ 73 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಪಡೆದರೆ, 30 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 20 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 13 ವಿದ್ಯಾರ್ಥಿಗಳು ತೃತಿಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.ಶಾಲೆಗೆ ದಾಖಲೆಯ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳನ್ನು ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ವಿ.ವೆಂಕಟಸುಬ್ಬಯ್ಯ ಚೆಟ್ಟಿ, ಜಂಟಿ ಕಾರ್ಯದರ್ಶಿ ಬಾಲ ಸುಬ್ರಮಣ್ಯಂ, ಶಾಲೆಯ ಧರ್ಮದರ್ಶಿ  ಡಾ.ಕೆ.ಪಿ.ಶೈಲಜಾ, ಶಿಕ್ಷಕ ವರ್ಗ ಶಾಲಾ ಮಂಡಳಿ ಅಭಿನಂದನೆ ಸಲ್ಲಿಸಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.