ನಿಧಿಗಳ್ಳರು ಎಂದು ಭಾವಿಸಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
ಸೂಲಿಬೆಲೆ: ನಿಧಿಗಾಗಿ ಬಂದಿದ್ದಾರೆ ಎಂದು ಭಾವಿಸಿ ಗುಂಪೊಂದರ ಮೇಲೆ ದಾಳಿ ಮಾಡಿದ ಗ್ರಾಮಸ್ಥರು ಮೂವರನ್ನು ಹಿಡಿದು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಹೊಸಕೋಟೆ ತಾಲೂಕಿನ ಡಿ.ಶಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಡಿ.ಶಟ್ಟಿಹಳ್ಳಿ ಗ್ರಾಮದ ಹೊರ ಭಾಗದಲ್ಲಿರುವ ಹುಣಿಸೇಮರದ ಕೆಳಗೆ ಪುರಾತನ ಕಾಲದ ವೀರಗಲ್ಲುಗಳಿದ್ದು, ಇದರ ತಳದಲ್ಲಿ ನಿಧಿ ಇದೆ ಎಂಬ ವದಂತಿ ಕೆಲ ವರ್ಷಗಳಿಂದ ಈ ಭಾಗದ ಜನರಲ್ಲಿ ಹರಿದಾಡುತ್ತಿದೆ. ಈ ಪ್ರದೇಶದಲ್ಲಿ ಸೋಮವಾರ ರಾತ್ರಿ ಗುಂಪೊಂದು ತಿರುಗಾಡುತ್ತಿರುವದನ್ನು ಅರಿತ ಗ್ರಾಮಸ್ಥರು ಅನುಮಾನಗೊಂಡು ಹುಣಿಸೇಮರಗಳ ಬಳಿ ತೆರೆಳಿ ನೋಡಿದಾಗ ಗುಂಪಿನ ಕೆಲವರು ಪೂಜೆಯಲ್ಲಿ ನಿರಂತರಾಗಿದ್ದರು ಎನ್ನಲಾಗಿದೆ. ತಕ್ಷಣ ಸುತ್ತುವರೆದ ಗ್ರಾಮಸ್ಥರು ನಿಧಿ ಕಳ್ಳರನ್ನು ಹಿಡಿಯಲು ಯತ್ನಿಸಿದ್ದು, ಕತ್ತಲಲ್ಲಿ ಪರಾರಿಯಾಗಿದ್ದಾರೆ. ಇದರಲ್ಲಿ ಮೂವರು ಸಿಕ್ಕಿ ಬಿದಿದ್ದು, ಇಬ್ಬರು ಸ್ವಾಮೀಜಿಗಳಿದ್ದರು ಎನ್ನಲಾಗಿದೆ. ಕಟ್ಟಿ ಹಾಕಿದರು: ಗ್ರಾಮಸ್ಥರ ಕೈಗೆ ಸಿಕ್ಕ ಮೂವರನ್ನು ಕಟ್ಟಿ ಹಾಕಿ ನಂದಗುಡಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಗ್ರಾಮಸ್ಥರು ಕಟ್ಟಿ ಹಾಕಿದ್ದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

