ಬೆಂಗಳೂರು ಗ್ರಾಮಾಂತರ

ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿತ: ಸಾವು

Published On :

ಕನಕಪುರ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರೇಷ್ಮೆಹುಳು ಸಾಕಾಣಿಕಾ ಮನೆಗೆ ಬೆಂಕಿಹಚ್ಚಿ ನಾಶಪಡಿಸಿದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿದ ಕಾರಣ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕನಕಪುರ ತಾಲೂಕು ದೊಡ್ಡಕಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತನ್ನು ಅರಳೀಮರದೊಡ್ಡಿಯ ನಿವಾಸಿ ರಾಜು (46) ಎಂದು ಗುರುತಿಸಲಾಗಿದೆ. ರಾಜು ಕಳ್ಳತನದ ಕಸುಬಿನಲ್ಲಿದ್ದು ಹಲವಾರು ಮೊಕದ್ದಮೆಗಳನ್ನು ಎದುರಿಸುತ್ತಿದ್ದ, ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದು ಹಳೆಯ ದ್ವೇಷದಿಂದ ಕಳೆದ ವಾರ ದೊಡ್ಡಕಬ್ಬಳ್ಳಿ ಗ್ರಾಮದ ಹಲವಾರು ರೈತರ ರೇಷ್ಮೆಹುಳು ಸಾಕಾಣಿಕಾ ಮನೆಗಳಿಗೆ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿ ಪರಾರಿಯಾಗಿದ್ದ. ಇಂದು ಗ್ರಾಮದಲ್ಲಿ ಆತ ಕಾಣಿಸಿಕೊಂಡ ಕೂಡಲೇ ರೊಚ್ಚಿಗೆದ್ದ ಗ್ರಾಮಸ್ಥರು ಆತನ ಮೇಲೆ ದಾಳಿನಡೆಸಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ತೀವ್ರವಾಗಿ ಪೆಟ್ಟುತಿಂದ ರಾಜು ಕಾಡುಶಿವನಹಳ್ಳಿ ರಸ್ತೆಯ ಕೆರೆಯ ಏರಿಯ ಕೆಳಗೆ ಸತ್ತು ಬಿದ್ದಿರುವುದು ಕಂಡುಬಂದಿದೆ.
2 ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸಾವು
ಮಾಗಡಿ: ಎರಡು ಬೈಕ್‌ಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ  ತಾಲೂಕಿನ ತಿಪ್ಪಸಂದ್ರ ಹೋಬಳಿ ಮಂಗಿಪಾಳ್ಯದಲ್ಲಿ ನಡೆದಿದೆ. ಕುಣಿಗಲ್ ತಾಲೂಕಿನ ಕುರಡಹಳ್ಳಿ ಗ್ರಾಮದ ವಾಸಿ ಮರಿಗುಡ್ಡಯ್ಯ ಮೃತಪಟ್ಟ ದುರ್ದೈವಿ. ಈತ ತಾಲೂಕಿನ ತಿಪ್ಪಸಂದ್ರ ಹೋಬಳಿ ಚಿಗಳೂರಿನಲ್ಲಿ ನಡೆದ ಊರ ಹಬ್ಬಕ್ಕೆಂದು ಬಂದಿದ್ದ. ಊಟ ಮುಗಿಸಿಕೊಂಡು ಬೈಕ್‌ನಲ್ಲಿ ಊರಿಗೆ ತೆರಳುತಿದ್ದಾಗ ಈ ದುರ್ಘಟನೆ  ನಡೆದಿದೆ. ಮತ್ತೊಬ್ಬ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದು, ಮಾಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.