ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ವಿಜಯೋತ್ಸವ
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಕೇಂದ್ರ ಸಚಿವ ಎಂ.ವೀರಪ್ಪಮೊಯ್ಲಿ ಸತತ 2 ನೇ ಬಾರಿಗೆ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಇಲ್ಲಿನ ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ಮೊಯ್ಲಿ ಗೆಲವು ಕ್ಷೇತ್ರದ ಕಾರ್ಯಕರ್ತರಲ್ಲಿ ಚೈತನ್ಯವನ್ನು ಇಮ್ಮಡಿಗೊಳಿಸಿದೆ. ಕ್ಷೇತ್ರ ವ್ಯಾಪ್ತಿಯ ಎಲ್ಲ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗಣನೀಯ ಪ್ರಮಾಣದಲ್ಲಿ ಮತಗಳಿಸಿದೆ. ದೊಡ್ಡಬಳ್ಳಾಪುರ ನಗರದಲ್ಲಿ ಮತ್ತಷ್ಟು ಹೆಚ್ಚಿನ ಮತ ದೊರೆಯುವ ನಿರೀಕ್ಷೆ
ಇತ್ತು. ಆದರೆ ಮೋದಿ ಅಲೆಯ ಪ್ರಭಾವದಿಂದಾಗಿ ನಿರೀಕ್ಷಿತ ಪ್ರಮಾಣದ ಮತಗಳಿಕೆ ಸಾಧ್ಯವಾಗಿಲ್ಲ. ಆದಾಗ್ಯೂ ಕಾಂಗ್ರೆಸ್ ಪಕ್ಷದ ಮೇಲೆ ಜನ ಇಟ್ಟಿರುವ ಭರವಸೆ ಮೊಯ್ಲಿ ಗೆಲವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು.
ಕೇಂದ್ರದಲ್ಲಿ ಕಾಂಗ್ರೆಸ್ ಕಳಪೆ ಸಾಧನೆ ಬಗ್ಗೆ ಪ್ರತಿಕ್ರಿಯಿಸದ ಅವರು ಜನ ಬದಲಾವಣೆ ಬಯಸಿ ಕೊಟ್ಟಿರುವ ತೀರ್ಪನ್ನು ಸ್ವಾಗತಿಸುತ್ತೇವೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ಪುನಶ್ಚೇತನಗೊಂಡು ಹೊಸ ಚಿಂತನೆಗಳೊಂದಿಗೆ ಸದೃಡವಾಗಿ ಬೆಳೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೃತಜ್ಞತೆ: ಕಾಂಗ್ರೆಸ್ಗೆ ಮತ ನೀಡಿರುವ ಎಲ್ಲ ಮತದಾರರು, ಚುನಾವಣಾ ಕಾರ್ಯಗಳನ್ನು ವ್ಯವಸ್ಥಿತವಾಗಿ ನಡೆಸಿಕೊಟ್ಟಿರುವ ಅಧಿಕಾರಿಗಳು ಸೇರಿದಂತೆ ಎಲ್ಲ ವರ್ಗದ ಜನರಿಗೆ ಅವರು ಕೃರ್ತತೆಗಳನ್ನು ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಎಂದಿನಂತೆ ತನ್ನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿದೆ ಎಂದರು.
ಕಾಂಗ್ರೆಸ್ ಮುಖಂಡರಾದ ಜವಾಜಿ ಸೀತಾರಾಂ, ಚುಂಚೇಗೌಡ, ರವಿ, ಬೈರೇಗೌಡ, ಸುನಿಲ್ಕುಮಾರ್, ಯೋಗಾ ನಟರಾಜ್, ಎಚ್.ಎಸ್.ರೇವತಿ ಅನಂತರಾಂ, ಪ್ರಭಾವತಿ, ವೆಂಕಟೇಶ್, ರಾಜೇಶ್, ನಾರಾಯಣ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

