ಬೆಂಗಳೂರು ಗ್ರಾಮಾಂತರ

ಅಭಿವೃದ್ಧಿ ಮೆಚ್ಚಿ ಮೊಯ್ಲಿಗೆ ಮತ

Published On :

ನೆಲಮಂಗಲ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಎಂ. ವೀರಪ್ಪ ಮೊಯ್ಲಿಯವರ  ವಿಜಯದ ಖುಷಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿದರು.  ಗ್ರಾ.ಪಂ.ಅಧ್ಯಕ್ಷ ಎಲ್.ಎಸ್.ಪ್ರಕಾಶ್ ಮಾತನಾಡಿ, ಮೊಯ್ಲಿ ಅವರು ತಮ್ಮ ಅಧಿಕಾರವಧಿಯಲ್ಲಿ ಮಾಡಿರುವ ಅಭಿವೃದ್ಧಿಗೆ ಜನರು ಮೆಚ್ಚಿ ಜಯ ನೀಡಿ ಆಶೀರ್ವದಿಸಿದ್ದಾರೆ ಎಂದರು.
ಸೋಂಪುರ ಗ್ರಾ.ಪಂ.ಮಾಜಿ ಅಧ್ಯಕ್ಷ ರುದ್ರಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಗೋವಿಂದರಾಜು, ಅಗಲಕುಪ್ಪೆ ಗ್ರಾ.ಪಂ.ಉಪಾಧ್ಯಕ್ಷ ಸೋಮಶೇಖರ್, ಶಿವಕುಮಾರ್, ಸದಸ್ಯರಾದ ಸಿದ್ದರಾಜು, ಕೃಷ್ಣಪ್ಪ, ಶಿವಣ್ಣ, ನರಸಿಂಹಯ್ಯ, ದೇವರಹೊಸಹಳ್ಳಿ ಯೋಗಾನಂದ್ ಗ್ರಾ.ಪಂ.ಮಾಜಿ ಅಧ್ಯಕ್ಷ ಖಲೀಂವುಲ್ಲಾ, ಅಶ್ವಥ್, ಬರಗೇನಹಳ್ಳಿ ಶ್ರೀನಿವಾಸ್, ಅಪ್ಪಯ್ಯಣ್ಣ,  ರಮೇಶ್ ಸೇರಿದಂತೆ ನೂರಾರು ಕಾಂಗ್ರೇಸ್‌ನ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.