ಬೆಂಗಳೂರು ಗ್ರಾಮಾಂತರ

ಉತ್ತಮ ಕೆಲಸಕ್ಕೆ ಸಿಕ್ಕ ಗೌರವ: ಡಿಕೆಶಿ

Published On :

ರಾಮನಗರ: ಹಿಂದಿನ ಸಂಸದರ ಕಾರ್ಯವೈಖರಿ ಸರಿ ಇಲ್ಲ ಎನ್ನುವ ಕಾರಣಕ್ಕೆ ಉಪ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನತೆ ಗೆಲ್ಲಿಸಿದ್ದರು.
    ಸಿಕ್ಕ ಅವಕಾಶದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದನ್ನು ಗಮನಿಸಿ ಈಗ ಇನ್ನೂ ದೊಡ್ಡ ಅಂತರದಲ್ಲಿ ಗೆಲ್ಲಿಸಿದ್ದಾರೆ ಎಂದು ಫಲಿತಾಂಶವನ್ನು ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿಶ್ಲೇಷಿಸಿದ್ದಾರೆ.  ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಪ್ರಧಾನವಾಗುವ ವಿಷಯಗಳು ಬೇರೆಯೇ ಆಗಿರುತ್ತವೆ. ಕಾಂಗ್ರೆಸ್ ಪಕ್ಷವು ಜನತೆಯ ತೀರ್ಪಿಗೆ ತಲೆಬಾಗುತ್ತದೆ. ರಾಜ್ಯದಲ್ಲಿ ಪಕ್ಷದ ಹಿನ್ನಡೆಗೆ ಯಾರೊಬ್ಬರು ಕಾರಣರಲ್ಲ ಎಂದು ಹೇಳುವ ಮೂಲಕ ಅವರ ಸಿದ್ದರಾಮಯ್ಯ ನಾಯಕತ್ವ ಬದಲಾವಣೆಯನ್ನು ಅಲ್ಲಗಳೆದಿದ್ದಾರೆ.
ಸೋಲಿನ ನೋವಿನಲ್ಲಿದ್ದಾರೆ: ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಹೋಗಿ 3ನೇ ಸ್ಥಾನಕ್ಕೆ ದೂಡಲ್ಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಪಾಪ ಅವರು ಸೋಲಿನ ನೋವಿನಲ್ಲಿದ್ದಾರೆ. ಅಂತಹವರ ಬಗ್ಗೆ ಮಾತನಾಡುವುದು ಸರಿಯಲ್ಲ. ಆ ಬಗ್ಗೆ ಅವರೇ ಮಾತನಾಡುತ್ತಾರೆ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.