ಪಾರದರ್ಶಕ ಆಡಳಿತಕ್ಕಾಗಿ ನರಸಿಂಹಯ್ಯ ಬೆಂಬಲಿಸಿ: ಕಾಂಗ್ರೆಸ್‌ನ ಮಂಜು ಮನವಿ
ಮಾಗಡಿ: ಪಾರದರ್ಶಕ ಆಡಳಿತಕ್ಕಾಗಿ, ರೈತಪರ ಕಾರ್ಯಕ್ರಮಕ್ಕಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬೋರ್‌ವೆಲ್ ನರಸಿಂಹಯ್ಯ ಅವರನ್ನು ಬೆಂಗಳೂರು ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ಬಹುಮತದಿಂದ ಬೆಂಬಲಿಸುವಂತೆ ಹಾಲು ಉತ್ಪಾದಕರ ಸಹಕಾರ ಸಂಘದ ಮತದಾರರಲ್ಲಿ ಕೆಪಿಸಿಸಿ ಸದಸ್ಯ ಎ. ಮಂಜು ಮನವಿ ಮಾಡಿದ್ದಾರೆ.
ಅವರು ಮಾಗಡಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂದು ಹಸು ಅವಲಂಬಿತ ರೈತ, ರೈತನ ಬದುಕು ಹಸನಾಗಬೇಕಾದರೆ ಸಹಕಾರ ಸಂಘಗಳು ಆರ್ಥಿಕವಾಗಿ ಸದೃಢವಾಗಬೇಕು. ಇದಕ್ಕಾಗಿ ಕಳೆದ ಬಾರಿ ಬೆಂಗಳೂರು ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ನಿಂತು ಸೋಲನ್ನು
ಅನುಭವಿಸಿರುವ ನರಸಿಂಹಯ್ಯ ಅವರನ್ನು ಗೆಲ್ಲಿಸಿಕೊಳ್ಳಬೇಕಾದುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಕ್ಷೇತ್ರದ ಎಲ್ಲಾ ಕಾಂಗ್ರೆಸ್ ಮುಖಂಡರು ಬೋರ್‌ವೆಲ್ ನರಸಿಂಹಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಾರದರ್ಶಕ ಆಡಳಿತಕ್ಕಾಗಿ, ಜನಪರ ಕಾರ್ಯಕ್ರಮಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ನೀಡಲು ಕಾಂಗ್ರೆಸ್ ಬದ್ಧವಾಗಿದೆ ಎಂದರು.
ಕಳೆದ 3 ಬಾರಿ ಬೆಂಗಳೂರು ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವ ನರಸಿಂಹಮೂರ್ತಿ ಪಾರದರ್ಶಕ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.
ಸಂಘದ ಸದೃಢ ಆರ್ಥಿಕತೆಗಾಗಿ ಈ ಬಾರಿ ಅಧಿಕ ಮತಗಳಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನರಸಿಂಹಯ್ಯ ಅವರನ್ನು ಎಲ್ಲರು ಒಗ್ಗಟ್ಟಿನಿಂದ ಗೆಲ್ಲಿಸುವಂತೆ ಎ.ಮಂಜು ಮನವಿ ಮಾಡಿದರು. ಇದೇ ವೇಳೆ ಬೆಂಗಳೂರು ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ನರಸಿಂಹಯ್ಯ ತಮ್ಮನ್ನು ಬೆಂಬಲಿಸಿ ಗೆಲ್ಲಿಸುವಂತೆ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು. ಕೆ.ಎಚ್. ಕೃಷ್ಣಮೂರ್ತಿ, ತ್ಯಾಗದೆರೆ ಪಾಳ್ಯದ ರಂಗಸ್ವಾಮಿ, ಫಹೀಂ ಉನ್ನಿಸಾ ನಯಾಜ್, ಗಿರಿಯಣ್ಣ, ಮೂರ್ತಿ, ಮುದ್ದಹನುಮಯ್ಯ,ಡಿ.ಸಿ. ಶಿವಣ್ಣ, ರಾಜು ಇತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

