ಬೆಂಗಳೂರು ಗ್ರಾಮಾಂತರ

26ರೊಳಗೆ ರಾಜಾ ಕಾಲುವೆ ಒತ್ತುವರಿ ತೆರವು ಶುರು ಮಾಡಿ

Published On :

ಬೆಂಗಳೂರು: ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಮಂದಿನ ಸೋಮವಾರ(ಮೇ26)ದ ಒಳಗಾಗಿ ಆರಂಭಿಸಬೇಕೆಂದು ನಗರದ ಜಿಲ್ಲಾಧಿಕಾರಿ ಮತ್ತು ಬಿಬಿಎಂಪಿ ಆಯುಕ್ತರು ತಾಕೀತು ಮಾಡಿದ್ದಾರೆ.
ಮೇಯರ್ ಸತ್ಯನಾರಾಯಣ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಪ್ರಕಾಶ್ ಮತ್ತು ಬಿಬಿಎಂಪಿ ಆಯುಕ್ತ ಲಕ್ಷ್ಮೀನಾರಾಯಣ ಸೋಮವಾರ ಅಧಿಕಾರಿಗಳ ಸಭೆ ನಡೆಸಿದರು. ಅಲ್ಲದೆ, ಮಳೆಗಾಲ ಸಮೀಪಿಸುತ್ತಿರುವುದರಿಂದ ರಾಜಕಾಲವೆ ಮೂಲಕ ಕೆರೆಗಳಿಗೆ ನೀರು ಹೋಗುವಂತಾಗಲು ಒತ್ತುವರಿ ತೆರವು ಕಾರ್ಯ ಆರಂಭಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ರಾಜಕಾಲುವೆ ಒತ್ತುವರಿ ಮಾಡಿರುವ ಬಗ್ಗೆ ಸರ್ವೆ ನಡೆಸಿದ ಜಿಲ್ಲಾಡಳಿತ ವರದಿ ನೀಡಿದ್ದರೂ ಬಿಬಿಎಂಪಿ ತೆರವು ಕಾರ್ಯ ಆರಂಭಿಸಿಲ್ಲ ಎಂದು 'ಕನ್ನಡಪ್ರಭ' ವರದಿ ಪ್ರಕಟಿಸಿತ್ತು.  ಸಭೆಯಲ್ಲಿದ್ದ ಶಾಸಕ ಬಿ.ಎನ್.ವಿಜಯಕುಮಾರ್ ಬಿಬಿಎಂಪಿ ರಾಜಕಾಲವೆ ವಿಭಾಗದ ಮುಖ್ಯ ಎಂಜಿನಿಯರ್ ಅನಂತಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಒತ್ತುವರಿ ತೆರವುಗೊಳಸದೆ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಮುಂದಿನ ಸೋಮವಾರದ ಒಳಗಾಗಿ ಒತ್ತುವರಿ ತೆರವು ಕಾರ್ಯ ಆರಂಭಿಸಬೇಕು. ಇಲ್ಲದಿದ್ದರೆ ಬಿಬಿಎಂಪಿ ಮುಂದೆ ಧರಣಿ ಆರಂಭಿಸುವುದು ಖಚಿತ. ಆನಂತರ ಯಾರೇ ಹೇಳಿದರೂ ಧರಣಿ ನಿಲ್ಲಿಸುವುದಿಲ್ಲ ಎಂದು ಅವರು ಎಚ್ಚರಿಸಿದರು.

ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿ
ಚನ್ನಪಟ್ಟಣ: ತಾಲೂಕು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ತಾಲೂಕಿನ 7 ಮೆಟ್ರೀಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಪರಿಶಿಷ್ಟ ಜಾತಿ, ವರ್ಗ ಹಾಗೂ ಹಿಂದುಳಿದ ವರ್ಗದ 5ರಿಂದ 10 ನೇತರಗತಿಯವರೆಗಿನ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಚನ್ನಪಟ್ಟಣ ಟೌನ್, ಮತ್ತೀಕೆರೆ, ಅಕ್ಕೂರು, ನಾಗವಾರ, ಕೋಡಂಬಹಳ್ಳಿಗಳಲ್ಲಿ ಬಾಲಕರ ವಿದ್ಯಾರ್ಥಿನಿಲಯ, ಚನ್ನಪಟ್ಟಣ ಟೌನ್ ಮತ್ತು ಶೆಟ್ಟಿಹಳ್ಳಿಯಲ್ಲಿ ಬಾಲಕಿಯ ವಿದ್ಯಾರ್ಥಿನಿಲಯಗಳಿದು, ಆಸಕ್ತ ವಿದ್ಯಾರ್ಥಿಗಳು ತಮ್ಮ ಇತ್ತೀಚಿನ ಎರಡು ಭಾವಚಿತ್ರದೊಂದಿಗೆ ತಾಲೂಕು ಸಮಾಜಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಿಗದಿತ ಅರ್ಜಿನಮೂನೆ ಪಡೆದೆ ಜೂ.10ರೊಳಗೆ ಸಲ್ಲಿಸಲು ಸಮಾಜಕಲ್ಯಾಣ ಇಲಾಖೆ ಪ್ರಕಟಣೆ ಕೋರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.