ಬೆಂಗಳೂರು ಗ್ರಾಮಾಂತರ

ಸಿಂಗರಾಜಪುರ ಗ್ರಾಪಂ ಅಧ್ಯಕ್ಷ ಜಯರಾಮು

Published On :

ಚನ್ನಪಟ್ಟಣ: ತಾಲೂಕಿನ ಸಿಂಗರಾಜಪುರ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹನಿಯೂರು ಗ್ರಾಮದ ಸದಸ್ಯ ಎಚ್.ಸಿ. ಜಯರಾಮು ಮತ್ತು ಶಶಿಕಲಾ ಕ್ರಮವಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಗೊಂಡಿದ್ದಾರೆ.
ಎರಡನೇ ಅವಧಿಗೆ ಆಯ್ಕೆಗೊಂಡಿದ್ದ ಅಧ್ಯಕ್ಷ, ಉಪಾಧ್ಯಕ್ಷರು ರಾಜಿನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮುವಾರ ಚುನಾವಣೆ ನಿಗದಿಯಾಗಿತ್ತು. ಚುನಾವಣೆಯಲ್ಲಿ ಇವರಿಬ್ಬರನ್ನು ಹೊರತು ಪಡಿಸಿದರೆ ಉಳಿದ ಯಾವುದೇ ಸದಸ್ಯರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಚುನಾವಣಾಧಿಕಾರಿ ಇವರ ಆಯ್ಕೆಯನ್ನು ಘೋಷಿಸಿದರು. 12 ಮಂದಿ ಸದಸ್ಯ ಬಲದ ಗ್ರಾ.ಪಂ ನಲ್ಲಿ 9 ಮಂದಿ ಸದಸ್ಯರು  ಚುನಾವಣೆ ವೇಳೆ ಹಾಜರಿದ್ದರೆ, ಮೂರು ಮಂದಿ ಗೈರಾಗಿದ್ದರು. ಅವಿರೋಧ ಆಯ್ಕೆಯ ಘೋಷಣೆ ಹೊರಬೀಳುತ್ತಿದ್ದಂತೆ ಜಯರಾಮು ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು.
ಅಭಿವೃದ್ಧಿಗಾಗಿ ಶ್ರಮಿಸುವೆ: ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಜಯರಾಮು ಮಾತನಾಡಿ, ಪಂಚಾಯಿತಿಯ ಸರ್ವಾಂಗೀಣ ಅಭಿವೃದ್ಧಿಗೆ ನನ್ನ ಅವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವ ಮೂಲಕ ಪಂಚಾಯಿತಿಯನ್ನು ಮಾದರಿ ಪಂಚಾಯಿತಿಯಾಗಿಸುವೆ ಎಂದು ತಿಳಿಸಿದರು.
ನನ್ನ ಅವಿರೋಧ ಆಯ್ಕೆಗೆ ಸಹಕರಿಸಿದ ಪಂಚಾಯಿತಿಯ ಎಲ್ಲಾ ಸದಸ್ಯರಿಗೆ, ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಮುಖಂಡರು ಮತ್ತು ಗ್ರಾಮದ ಜನತೆಗೆ ಅಭಿನಂದನೆ ಸಲ್ಲಿಸಿದ ಅವರು ಎಲ್ಲರು ನನ್ನ ಮೇಲಿರಿಸಿರುವ ವಿಶ್ವಾಸಕ್ಕೆ ಚ್ಯುತಿಬಾರದಂತೆ ಕೆಲಸಮಾಡುವುದಾಗಿ ತಿಳಿಸಿದರು.

5 ದಿನಗಳ ಬಾಲವಿಜ್ಞಾನ ಕಾರ್ಯಾಗಾರ
ಚನ್ನಪಟ್ಟಣ : ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಆವಿಷ್ಕಾರದ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಮೇ 21 ರಿಂದ 5 ದಿನಗಳ ಬಾಲವಿಜ್ಞಾನ ಕಾರ್ಯಾಗಾರವನ್ನು ತಾಲೂಕಿನ ಪಟ್ಲು ಗ್ರಾಮದ ಮಾನಸ ಟ್ರಸ್ಟ್ ಇಲ್ಲಿನ ನಗರಸಭಾ ಹೆಲ್ತ್ ಕ್ಲಬ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. 9ನೇ ತರಗತಿ ವಿದ್ಯಾರ್ಥಿಯಾಗಿರುವ ಎಸ್. ಹರ್ಷ ಸ್ವ ಆಸಕ್ತಿಯಿಂದ ಸಾಕಷ್ಟು ವೈಜ್ಞಾನಿಕ ಆವಿಷ್ಕಾರಗಳನ್ನು ಮಾಡಿದ್ದು ಇದನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಆತನ ಮೂಲಕವೇ ಕಲಿಸುವ ಉದ್ದೇಶದಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಪಿ.ಜೆ. ಗೋವಿಂದರಾಜು ತಿಳಿಸಿದ್ದಾರೆ. ಕಾರ್ಯಾಗಾರಕ್ಕೆ ಉರಿಲಿಂಗ ಪೆದ್ದ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಚಾಲನೆ ನೀಡಲಿದ್ದು, ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥ ಮಹೇಂದ್ರ ಎಸ್.ಎ, ಉಪನ್ಯಾಸಕ ದೊಡ್ಡಬೋರಯ್ಯ, ಪಾಲಿಟೆಕ್ನಿಕ್ ಶಾಲೆ ಮೆಕಾನಿಕಲ್ ವಿಭಾಗದ ಮುಖ್ಯಸ್ಥ ಆಯೂಬ್ ಖಾನ್ ಇನ್ನು ಮುಂತಾದವರು ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.