ಬೆಂಗಳೂರು ಗ್ರಾಮಾಂತರ

ಎಚ್.ಪಿ. ರಾಜಕುಮಾರ್ ಅವಿರೋಧ ಆಯ್ಕೆ

Published On :

ಕನಕಪುರ: ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ನಿರ್ದೇಶಕರ ಸ್ಥಾನಕ್ಕೆ ಕನಕಪುರ ತಾಲೂಕಿನಿಂದ ಹುಣಸನಹಳ್ಳಿ ಗ್ರಾಮದ ಎಚ್.ಪಿ. ರಾಜಕುಮಾರ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ತೀವ್ರ ತುರುಸಿನ ಹಣಾಹಣಿಯಿದ್ದು ಬಮೂಲ್ ನಿರ್ದೇಶಕ ಸ್ಥಾನಕ್ಕೆ ಹಾಲಿ ನಿರ್ದೇಶಕ ನಟೇಶ್, ವಿಶ್ವನಾಥ್, ಸೂರನಹಳ್ಳಿ ಜಯರಾಂ ಹಾಗೂ ವಿಪ ಮಾಜಿ ಸದಸ್ಯ ಎಸ್.ರವಿ ಅವರ ಪೈಪೋಟಿ ಇದೆ ಎಂದು ಹೇಳಲಾಗುತ್ತಿತ್ತು. ಜನತಾದಳ ಪಕ್ಷದಿಂದ ಹರೀಶ್ ಕುಮಾರ್ ನಾಮಪತ್ರ ಸಲ್ಲಿಸಿದ್ದರು.  ಸಂಸದ ಡಿ.ಕೆ. ಸುರೇಶ್ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಸೂಚನೆಯಂತೆ ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ್ದ ವಿಶ್ವನಾಥ್ ನಾಮಪತ್ರ ಹಿಂಪಡೆದರು. ಹಾಗೂ ಜೆಡಿಎಸ್‌ನ ಹರೀಶ್ ಕುಮಾರ್ ಕಣದಿಂದ ಹಿಂದೆ ಸರಿಯುವಂತೆ ಮನವೊಲಿಸಲು ಸಂಸದರು ಯಶಸ್ವಿಯಾದ ಹಿನ್ನೆಲೆಯಲ್ಲಿ ಬಮೂಲ್‌ಗೆ ಕನಕಪುರ ತಾಲೂಕಿನಿಂದ ನಿರ್ದೇಶಕರಾಗಿ ಎಚ್.ಪಿ. ರಾಜಕುಮಾರ್ ಅವಿರೋಧವಾಗಿ ಆಯ್ಕೆಗೊಂಡರು.
ಕನಕಪುರ ತಾಲೂಕಿನಲ್ಲಿ ಎರಡು ನೂರಕ್ಕೂ ಹೆಚ್ಚು ಹಾಲು ಸಹಕಾರ ಸಂಘಗಳಿದ್ದು ಗಡಿಪ್ರದೇಶದಲ್ಲಿ ಹೆಚ್ಚು ಹೆಚ್ಚು ಡೈರಿಗಳ ಸ್ಥಾಪನೆಗೆ ಆದ್ಯತೆ ನೀಡುವುದು, ಸರ್ಕಾರದ ಸಹಾಯಧನ ಹಾಗೂ ರೈತರಿಗೆ ನಗದನ್ನು ನಿಗದಿತವಾಗಿ ಪಾವತಿಸಲು ಕ್ರಮ ಕೈಗೊಳ್ಳುವುದು, ಅಳತೆ ಮತ್ತು ತೂಕದಲ್ಲಿ ನವೀನ ತಂತ್ರಜ್ಞಾನ ಒದಗಿಸುವುದು, ಹಸುಗಳನ್ನು ಕೊಳ್ಳಲು ರೈತರಿಗೆ ಸಾಲ ಸೌಲಭ್ಯ ಒದಗಿಸುವುದು, ರೈತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ,ನಗದು ಬಹುಮಾನಗಳನ್ನು ನೀಡಿ ಉತ್ತೇಜಿಸುವುದು ತಮ್ಮ ಆದ್ಯತೆಯಾಗಿದೆ ಎಂದು ಹೆಚ್.ಪಿ.ರಾಜಕುಮಾರ್ ತಿಳಿಸಿದ್ದಾರೆ. ತಮ್ಮ ಅವಿರೋಧ ಆಯ್ಕೆಗೆ ಕಾರಣರಾದ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.