ಅಪಘಾತ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಟೆಂಪೋ ಡಿಕ್ಕಿ
ಸೂಲಿಬೆಲೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 207ರ ಹೊಸಕೋಟೆ ಸೂಲಿಬೆಲೆ ಮಾರ್ಗದ ಯನಗುಂಟೆ ಬಳಿ ಕಾರೊಂದಕ್ಕೆ ಡಿಕ್ಕಿ ಹೊಡೆಯುವದನ್ನು ತಪ್ಪಿಸಲು ಹೋಗಿ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ನಡೆದಿದೆ.
ಹೊಸಕೋಟೆ ಕಡೆಯಿಂದ ಸರಕು ತುಂಬಿಕೊಂಡು ಸೂಲಿಬೆಲೆ ಮಾರ್ಗವಾಗಿ ದೇವನಹಳ್ಳಿ ಹೋಗಲು ಬರುತ್ತಿದ್ದ ಟೆಂಪೋ ಯನಗುಂಟೆ ಗ್ರಾಮದಲ್ಲಿರುವ ಕಲ್ಯಾಣ ಮಂಟಪ ಬಳಿ ಕಾರೊಂದು ತಿರುವು ಪಡೆಯುತ್ತಿತ್ತು. ಈ ವೇಳೆ ಅತಿವೇಗದಿಂದ ಹೊಸಕೋಟೆ ಕಡೆಯಿಂದ ಬಂದ ಟೆಂಪೋ ಕಾರಿಗೆ ಡಿಕ್ಕಿ ಹೊಡೆಯುವದನ್ನು ತಪ್ಪಿಸಲು ಹೋಗಿ ಪಕ್ಕದಲ್ಲಿಯೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಉರುಳಿ ಬಿತ್ತು. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು, ಈ ವೇಳೆ ವಿದ್ಯುತ್ ಪ್ರವಹಿಸುತ್ತಿತ್ತು ಎನ್ನಲಾಗಿದೆ. ಕಂಬ ಮುರಿದು ಬಿದ್ದರೂ ಕಂಬದಲ್ಲಿದ್ದ ತಂತಿಗಳು ತುಂಡಾಗದೇ ಇದ್ದುದರಿಂದ ಭಾರಿ ಅನಾಹುತ ತಪ್ಪಿದೆ. ಘಟನೆಯ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಧಾವಿಸಿದ ಬೆಸ್ಕಾಂ ಎಇಇ ಅನಿಲ್ಕುಮಾರ್ ಹಾಗೂ ಸೂಲಿಬೆಲೆ ಪೊಲೀಸರು ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

