ವಿದ್ಯುತ್ ತಂತಿ ತುಳಿದು ವೃದ್ಧ ದಂಪತಿ ಸಾವು
ರಾಮನಗರ: ತೋಟಕ್ಕೆ ಹುಲ್ಲು ತರಲು ತೆರಳಿದ್ದ ವೃದ್ಧ ದಂಪತಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿರುವ ಘಟನೆ ತಾಲೂಕಿನ ರಾಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ. ಬಿಡದಿ ಹೋಬಳಿ ರಾಮನಹಳ್ಳಿ ಗ್ರಾಮದ ಕೃಷ್ಣಪ್ಪ (60) ಹಾಗೂ ಇವರ ಪತ್ನಿ ಗೌರಮ್ಮ (52) ಮೃತ ದಂಪತಿ. ಮಂಗಳವಾರ ಸಂಜೆ ರಾಸುಗಳಿಗೆ ಹುಲ್ಲು ತರಲೆಂದು ತಮ್ಮ ತೋಟಕ್ಕೆ ತೆರಳಿದ್ದರು. ಈ ವೇಳೆ ಮಳೆ, ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದ ಕೃಷ್ಣಪ್ಪ ತುಳಿದಿದ್ದಾರೆ.
ವಿದ್ಯತ್ಸ್ ಸ್ಪರ್ಶಕ್ಕೊಳಗಾಗಿ ಚೀರಾಡುತ್ತಿದ್ದ ಪತಿಯ ರಕ್ಷಣೆಗೆ ಧಾವಿಸಿದ ಗೌರಮ್ಮ ಅವರಿಗೂ ಕೂಡ ವಿದ್ಯುತ್ ಪ್ರವಹಿಸಿ ಕ್ಷಣ ಮಾತ್ರದಲ್ಲೇ ಸಾವನ್ನಪ್ಪಿದರು. ಇದನ್ನ ಗಮನಿಸಿದ ಸ್ಥಳೀಯರು ಬೆಸ್ಕಾಂಗೆ ದೂರವಾಣಿ ಕರೆ ಮಾಡಿ ವಿದ್ಯುತ್ ಸ್ಥಗಿತಗೊಳಿಸಿದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬಿಡದಿ ಪೊಲೀಸರು ಮಹಜರು ನಡೆಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

