ಬೆಂಗಳೂರು ಗ್ರಾಮಾಂತರ

ಸೇವಾದಳದ ಕಾರ್ಯಕ್ರಮಗಳಿಗೆ ಜನಪ್ರತಿನಿಧಿಗಳ ಸಹಕಾರ ಬೇಕು

Published On :

ಕೋಲಾರ: ಭಾರತ ಸೇವಾ ದಳದ ಕಾರ್ಯಕ್ರಮಗಳು ಜನರಿಗೆ ತಲುಪುವಂತಾಗಲು ಜನಪ್ರತಿನಿಧಿಗಳ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಎಸ್.ಗಣೇಶ್ ಅಭಿಪ್ರಾಯಿಸಿದರು. ಭಾರತ ಸೇವಾದಳ ಜಿಲ್ಲಾ ಸಮಿತಿ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೇವೆಗಾಗಿ ಬಾಳು ಧ್ಯೇಯದ ಭಾರತ ಸೇವಾದಳದ ಕಾರ್ಯ ಚಟುವಟಿಕೆಗಳಲ್ಲಿ ನಗರ ಹಾಗೂ ಗ್ರಾಮೀಣ ಜನಪ್ರತಿನಿಧಿಗಳನ್ನು ಸಕ್ರಿಯವಾಗಿ ಭಾಗವಹಿಸುವಂತೆ ಮಾಡುವ ಮೂಲಕ ಸಾರ್ಥಕ ಸೇವೆಗೆ ಮುಂದಾಗಬೇಕಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದ ಮೊದಲ ಭಾಗವಾಗಿ ಕೋಲಾರ ನಗರಸಭೆಯ ಎಲ್ಲಾ 35 ನಗರಸಭಾ ಸದಸ್ಯರಿಗೂ ಸೇವಾದಳದ ಕಾರ್ಯಚಟುವಟಿಕೆಗಳನ್ನು ಪರಿಚಯಿಸಿ, ಅವರನ್ನು ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಮಾಡುವ ಸಲುವಾಗಿ ಜೂ. 7 ರಂದು ಕೋಲಾರ ಪತ್ರರ್ತರ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ಭಾರತ ಸೇವಾದಳ ಈ ವರ್ಷವೂ ಪ್ರತಿ ತಾಲೂಕಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಪಡೆದ ಮೂವರನ್ನು ಆಹ್ವಾನಿಸಿ ಪ್ರತಿಭಾ ಪುರಸ್ಕಾರ ನೀಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಯಿತು. ಪದಾಧಿಕಾರಿಗಳಾದ ವಿ.ಪಿ.ಸೋಮಶೇಖರ್, ಎಸ್.ಸುಧಾಕರ್, ವೈ.ಶಿವಕುಮಾರ್, ಎಂ.ನಾಗರಾಜ್,  ಚಾಮುಂಡೇಶ್ವರಿ ದೇವಿ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.