ಎತ್ತಿನಹೊಳೆ ಶೀಘ್ರವೇ ಕಾರ್ಯರೂಪಕ್ಕೆ: ಮೊಯ್ಲಿ
ವಿಜಯಪುರ: ಬಯಲುಸೀಮೆಗೆ ನೀರುಣಿಸುವ ಎತ್ತಿನಹೊಳೆ ಕಾಮಗಾರಿಯ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಸಚಿವರ ಸಭೆ ನೆಡೆಯಲಿದ್ದು ಕಾಮಗಾರಿಯು ಶೀಫ್ರಗತಿಯಲ್ಲಿ ಕಾರ್ಯರೂಪಗೊಳ್ಳಲಿದೆ ಎಂದು ಸಂಸದ ವೀರಪ್ಪಮೊಯ್ಲಿ ತಿಳಿಸಿದರು.
ಸಂಸದರಾದ ನಂತರ ಮೊದಲ ಬಾರಿಗೆ ವಿಜಯಪುರ ಪಟ್ಟಣಕ್ಕೆ ಭೇಟಿ ನೀಡಿದ ಅವರು, ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ತಾಲೂಕಿನಲ್ಲಿ ಹೆಚ್ಚಿನ ಮತಗಳು ವಿಜಯಪುರ ಪಟ್ಟಣದಿಂದ ದೊರೆತಿದ್ದು, ಇದಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದರು.
ಇದೇ ವೇಳೆ ಕುಡಿವ ನೀರು, ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ಪಟ್ಟಣದಲ್ಲಿನ ವಿದ್ಯುತ್ ಕೊರತೆ ಮತ್ತಿತರೆ ಸಮಸ್ಯೆಗಳ ಬಗ್ಗೆ ಲಿಖಿತ ರೂಪದಲ್ಲಿ ಮನವರಿಕೆ ಮಾಡಿಕೊಡಲಾಯಿತು. ಪುರಸಭೆ ಅಧ್ಯಕ್ಷೆ ಅನಸೂಯಮ್ಮ ಸಂಪತ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿನಾರಾಯಣಪ್ಪ, ವಿ.ಮಂಜುನಾಥ್, ವಿಜಯಪುರ ಟೌನ್ ಅಧ್ಯಕ್ಷ ಸತೀಶ್‌ಕುಮಾರ್, ನಾರಾಯಣಗೌಡ, ಪುರಸಭೆ ಸದಸ್ಯರು, ಮಾಜಿ ಸದಸ್ಯರು, ಭಾಗವಹಿಸಿದ್ದರು.
ನೆಲಮಂಗಲದಲ್ಲೂ ಸಭೆ
ನೆಲಮಂಗಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿ ಎತ್ತಿನ ಹೊಳೆ ಯೋಜನೆ ಶೀಘ್ರವೇ ಪ್ರಾರಂಭವಾಗಲಿದೆ ಎಂದು ಸಂಸದ ಡಾಎಂ.ವೀರಪ್ಪಮೊಯ್ಲಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ, ಈ ಭಾಗಕ್ಕೆ ಹೆಚ್ಚಿನ ಮೂಲಸೌಕರ್ಯ ಹಾಗೂ ಉತ್ತಮ ಯೋಜನೆ ದೊರಕಿಸುವಲ್ಲಿ ಶ್ರಮಿಸುವುದಾಗಿ ತಿಳಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದರಾಮು, ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ್, ನಾಗರಾಜು, ಕಿರಣ್, ನವಾಬ್‌ಜಾನ್, ಉಮಾಶಂಕರ್, ಸಿ.ಆರ್.ಗೌಡ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

