ಬೆಂಗಳೂರು ಗ್ರಾಮಾಂತರ

ಗ್ರಾಮೀಣ ಭಾಗಕ್ಕೆ ಆರೋಗ್ಯ ಶಿಬಿರ ಅಗತ್ಯ

Published On :

ಚನ್ನಪಟ್ಟಣ: ಪಟ್ಟಣ ಪ್ರದೇಶದಿಂದ ದೂರದಲ್ಲಿರುವ ಗ್ರಾಮಗಲ ಜನತೆ ನಗರಕ್ಕೆ ಬಂದು ಚಿಕಿತ್ಸೆ ಪಡೆಯುವುದು ಕಷ್ಟ ಸಾಧ್ಯವಾಗಿದ್ದು ಇಂತಹ ಜನತೆಗೆ ಉಚಿತ ಆರೋಗ್ಯ ಶಿಬಿರಗಳು ಸಾಕಷ್ಟು ಅನುಕೂಲವಾಗಲಿವೆ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಅಪ್ಪಾಜಿಗೌಡ ಅಭಿಪ್ರಾಯಪಟ್ಟರು.
ತಾಲೂಕಿನ ಗಡಿಗ್ರಾಮ ಬೊಮ್ಮನಾಯ್ಕನಹಳ್ಳಿಯಲ್ಲಿ ತೇಜಸ್ವಿನಿ ಮೆಮೋರಿಯಲ್ ಟ್ರಸ್ಟ್ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಜನತೆಗೆ ಉಚಿತ ಆರೋಗ್ಯ ತಪಾಸಣೆ ಜತೆಗೆ ಆರೋಗ್ಯದ ಬಗ್ಗೆ ಸಹ ಅರಿವು ಮೂಡಿಸಬೇಕಿದೆ. ಇಂತಹ ಶಿಬಿರಗಳಿಗೆ ನಮ್ಮ ಸಂಘದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ ಅವರು, ತಾಲೂಕಿನ ಇತರ ಭಾಗಗಳಲ್ಲಿ ಸಹ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲು ಸಂಘ- ಸಂಸ್ಥೆಗಳು ಮುಂದಾಗಬೇಕೆಂದು ಕಿವಿಮಾತು ಹೇಳಿದರು.  ಬೆಂಗಳೂರಿನ ನೇತ್ರ ತಪಾಸಣೆ, ಮೂಳೆ, ಚರ್ಮ, ನರರೋಗ, ದಂತ ತಪಾಸಣೆ ಹಾಗೂ ಹೃದಯ ಕಾಯಿಲೆಗಳಿಗೆ ಸಂಬಂಧಿಸಿದ ನುರಿತ ವೈದ್ಯರು ತಪಾಸಣೆ ನಡೆಸಿದರು. ಸ್ಥಳದಲ್ಲೇ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಇಸಿಜಿ, ಎಕೋ ಪರೀಕ್ಷೆ ನಡೆಸಲಾಯಿತು. ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ.ನಿಸರ್ಗ, ಎಂ.ಎ.ಆನಂದ್, ತಾಪಂ ಮಾಜಿ  ಅಧ್ಯಕ್ಷ ನಾರಾಯಣಗೌಡ, ಬಿ.ಎ.ಚನ್ನಪ್ಪಗೌಡ, ಹಾಪ್‌ಕಾಮ್ಸ್ ದೇವರಾಜು ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.