ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಳೆದ ಒಂದು ವಾರದಿಂದ ದೆಹಲಿಯಲ್ಲಿದ್ದ ಸಿದ್ದರಾಮಯ್ಯ, ಆಹಾರ ಹಾಗೂ ವಾತಾವರಣ ಬದಲಾವಣೆ ಹಿನ್ನೆಲೆಯಲ್ಲಿ ಉದರ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯರು ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಟಿಕೆಟ್ ಹಂಚಿಕೆ ಸಮಸ್ಯೆ ಬಗೆ ಹರಿಯದೇ ಇದ್ದುದರಿಂದ ಮಾ.25ರಿಂದ 31ರವರೆಗೆ ಸಿದ್ದರಾಮಯ್ಯ ದೆಹಲಿಯಲ್ಲೇ ಇರುವಂತಾಗಿತ್ತು.