ಬೇಲೆಕೇರಿಯಿಂದ ಅದಿರು ಕಳ್ಳ ಸಾಗಣೆ ಮೂವರ ಬಂಧನ

Updated on: 

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಕಳ್ಳ ಸಾಗಣೆ ಮಾಡಿದ ಪ್ರಕರಣ ಸಂಬಂಧ ಶಾಸಕ ಆನಂದ್ ಸಿಂಗ್ ಸಂಬಂಧಿ, ಮಾಜಿ ಶಾಸಕರ ಪುತ್ರ ಸೇರಿದಂತೆ ಮೂವರನ್ನು ಸಿಬಿಐ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಕೂಡ್ಲಿಗಿ ಶಾಸಕ ಬಿ.ನಾಗೇಂದ್ರ ಅವರ ಒಡೆತನದ ಈಗಲ್ ಟ್ರೇಡರ್ಸ್‌ನ ಪಾಲುದಾರ ಕುರುಬ ನಾಗರಾಜ್, ಹೊಸಪೇಟೆ ಶಾಸಕ ಆನಂದ್ ಸಿಂಗ್ ಸಂಬಂಧಿ ಮಾಜಿ ಶಾಸಕ ಸತ್ಯನಾರಾಯಣ ಸಿಂಗ್ ಅವರ ಪುತ್ರ ಪ್ರವೀಣ್ ಸಿಂಗ್ ಹಾಗೂ ಎಸ್.ಬಿ ಲಾಜಿಸ್ಟಿಕ್‌ನ ಕೆ.ಜನಾರ್ಧನ ರೆಡ್ಡಿ ಎಂಬುವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮೂವರನ್ನು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಡಿ.13ರ ವರೆಗೆ ಸಿಬಿಐ ಅಧಿಕಾರಿಗಳ ವಶಕ್ಕೆ ಒಪ್ಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com