ಬೆಂಗಳೂರು ನಗರ

ಆರೋಗ್ಯ ಸಚಿವ ಲಿಂಬಾವಳಿಗೆ ಸ್ಯಾಮ್ ಪಿತ್ರೋಡಾ ಅಭಿನಂದನೆ

Published On :

ಬೆಂಗಳೂರು: ರಾಜ್ಯದಲ್ಲಿ ಅಂತರ್‌ವಿಷಯ ಆರೋಗ್ಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಮುಂದಾಗಿರುವುದಕ್ಕೆ ಆರೋಗ್ಯ ಸಚಿವ ಅರವಿಂದ ಲಿಂಬಾವಳಿ ಅವರನ್ನು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಮತ್ತು ತಾಂತ್ರಿಕ ತಜ್ಞ ಸ್ಯಾಮ್ ಪಿತ್ರೋಡಾ ಅವರು ಅಭಿನಂದಿಸಿದ್ದಾರೆ. ಈ ಕುರಿತು ಸಚಿವ ಅರವಿಂದ ಲಿಂಬಾವಳಿ ಅವರಿಗೆ ಸ್ಯಾಮ್ ಪಿತ್ರೋಡಾ ಪತ್ರ ಬರೆದಿದ್ದಾರೆ.
ಸಾರ್ವಜನಿಕರಿಗೆ, ಅದರಲ್ಲೂ ಮುಖ್ಯವಾಗಿ ಆರೋಗ್ಯ ಕ್ಷೇತ್ರಕ್ಕೆ ಉಪಯೋಗವಾಗುವ ಈ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುಮತಿ ದೊರಕಿಸುವ ದಿಸೆಯಲ್ಲಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ವಿಧೇಯಕ ಮಂಡಿಸಿ ಅದಕ್ಕೆ ಆಡಳಿತ ಮತ್ತು ಪ್ರತಿಪಕ್ಷಗಳ ಒಪ್ಪಿಗೆಯನ್ನು ಶೀಘ್ರವಾಗಿ ದೊರಕಿಸಿದ್ದು ಲಿಂಬಾವಳಿ ಅವರ ದಕ್ಷತೆಗೆ ಕೈಗನ್ನಡಿ ಎಂದು ಪತ್ರದಲ್ಲಿ ಹೇಳಿದ್ದಾರೆ. ಲಿಂಬಾವಳಿ ಅವರ ಈ ಪ್ರಯತ್ನ ಅವರ ಬದ್ಧತೆ ಮತ್ತು ಸಾಮಾಜಿಕ ಬದಲಾವಣೆ ತರುವ ನಿಟ್ಟಿನಲ್ಲಿ ಅವರು ಹೊಂದಿರುವ ದಿಟ್ಟತನಕ್ಕೆ ನಿದರ್ಶನವಾಗಿದೆ ಎಂದು ಶ್ಲಾಘಿಸಿರುವ ಅವರು, ಇದರಿಂದ ನಾನೂ ಪ್ರಭಾವಿತನಾಗಿದ್ದೇನೆ ಎಂದು ತಿಳಿಸಿದ್ದಾರೆ. ಉದ್ದೇಶಿತ ನೂತನ ಅಂತರ್‌ವಿಷಯ ಆರೋಗ್ಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಕರ್ನಾಟಕ ಮಾತ್ರವಲ್ಲ, ಇಡೀ ದೇಶಕ್ಕೆ ಹೆಮ್ಮೆ ತರುವ ವಿಚಾರ. ಇದೊಂದು ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಕೇಂದ್ರವಾಗುವುದು ನಿಶ್ಚಿತ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.