ಬೆಂಗಳೂರು ನಗರ

ಅತ್ಯಾಚಾರ ದೌರ್ಜನ್ಯ ತಡೆಗಟ್ಟುವಲ್ಲಿ ಸರ್ಕಾರ ವಿಫಲ

Published On :

ಸೂಲಿಬೆಲೆ: ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಮತ್ತು ಅತ್ಯಾಚಾರಗಳನ್ನು ತಡೆಗಟ್ಟವಲ್ಲಿ ಸರ್ಕಾರ ವಿಫಲವಾಗಿದೆ. ಕಠಿಣ ಕಾನೂನು ಜಾರಿಯಾದರೆ ಮಾತ್ರ ಇದರ ನಿಯಂತ್ರಣ ಸಾಧ್ಯ ಎಂದು ಮಹಿಳಾ ಒಕ್ಕೂಟದ ಅಧ್ಯಕ್ಷೆ ಜೆರೋಜಾ ಫಿಲೋಮಿನಾ ಅಭಿಪ್ರಾಯಪಟ್ಟಿದ್ದಾರೆ.
ಇಲ್ಲಿಗೆ ಸಮೀಪದ ಮುತ್ರಂದ್ರ ಗ್ರಾಮದಲ್ಲಿ ನಡೆದ ಕೋಮು ಸೌಹಾರ್ದತೆಯಲ್ಲಿ ಮಹಿಳೆಯರ ಪಾತ್ರ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ದಬ್ಬಾಳಿಕೆ ನಿರಂತರವಾಗಿ ನಡೆಯುತ್ತಿರುವುದು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಜಾತಿ, ಧರ್ಮಗಳ ನಡುವೆ ಮಹಿಳೆಯರು ಕೋಮುವಾದಿಗಳ ಕೆಂಗಣ್ಣಿಗೆ  ಗುರಿಯಾಗಿ ಬಲಿಪಶುಗಳಾಗುತ್ತಿದ್ದಾರೆ. ಸಂಸಾರವನ್ನು ಸರಾಗ ನಡೆಸುವ ಶಕ್ತಿಯನ್ನು ಹೊಂದಿರುವ ಮಹಿಳೆಯರು ಈ ದೇಶವನ್ನು ಮುನ್ನಡೆಸುವಲ್ಲಿ ಶಕ್ತರಾಗಿದ್ದಾರೆ ಎಂದರು. ಕಲಾ ತಂಡದವರು ಮಹಿಳೆಯರ ಜಾಗೃತಿ ಗೀತೆಗಳನ್ನು ಹಾಡಿದರು. ಸ್ಫೂರ್ತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ನಾಗರಾಜ್, ನಿರ್ದೇಶಕ ಟಿ. ವೆಂಕಟೇಶ್, ಹನುಮಂತರಾಯಪ್ಪ, ಲೂಥ್ ಮೇರಿ, ಮೀನಾ, ನಾನಾ ಸಂಘಗಳ  60 ಮಹಿಳಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.