ಬೆಂಗಳೂರು ನಗರ

ರಾಜ್ಯಕ್ಕೆ ಮೋದಿ ಶೀಘ್ರ ಭೇಟಿ: ಅನಂತಕುಮಾರ್

Published On :

ಬೆಂಗಳೂರು: ರಾಜ್ಯದ ಸಾರಿಗೆ ವ್ಯವಸ್ಥೆ ಮೆಚ್ಚಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸದ್ಯದಲ್ಲೇ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ತಿಳಿಸಿದ್ದಾರೆ.
ಬಿಬಿಎಂಪಿ ಭಾನುವಾರ ಚಿಕ್ಕಲ್ಲಸಂದ್ರದಲ್ಲಿ ಏರ್ಪಡಿಸಿದ್ದ ಅಶ್ವಾರೂಢ ಕೆಂಪೇಗೌಡ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯ ರಸ್ತೆ ಸಾರಿಗೆ ದೇಶದಲ್ಲೇ ಮೆಚ್ಚುಗೆಗೆ ಪಾತ್ರವಾಗಿದೆ. ಆದ್ದರಿಂದ ಇಲ್ಲಿನ ಸಾರಿಗೆ ವ್ಯವಸ್ಥೆಯನ್ನು ಪ್ರತ್ಯಕ್ಷ ನೋಡಲು ನರೇಂದ್ರ ಮೋದಿ ಅವರೇ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ ಇಷ್ಟೆಲ್ಲಾ ಅಭಿವೃದ್ಧಿಯಾಗಿರುವುದರಿಂದ ನಗರದಲ್ಲಿ 'ಸಾರಿಗೆ ಹಬ್ಬ' ಹೆಸರಿನಲ್ಲಿ ಒಂದು ಜಾಗೃತಿ ಉತ್ಸವ ಆಚರಿಸಬೇಕಿದೆ. ಏಕೆಂದರೆ, 100 ವರ್ಷಗಳ ಹಿಂದೆ ಸಾರಿಗೆ ವ್ಯವಸ್ಥೆ ಹೇಗಿತ್ತು. ಈಗ ಹೇಗೆ ಬದಲಾಗಿದೆ ಎಂಬ ಪ್ರದರ್ಶನ ಮತ್ತು ಮಾಹಿತಿ ನೀಡುವ ಕಾರ್ಯಕ್ರಮ ನಡೆಸುವ ಅಗತ್ಯವಿದೆ ಎಂದು ಅನಂತಕುಮಾರ್ ಸಲಹೆ ನೀಡಿದರು.
ಇದಕ್ಕೂ ಮುನ್ನ ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಆರ್.ಅಶೋಕ, ಕೆಆರ್ಎಸ್ ನಿರ್ಮಾತೃ ವಿಶ್ವೇಶ್ವರಯ್ಯ ಹೇಗೆ ಮೈಸೂರಿಗೆ ಮುಖ್ಯರಾಗುತ್ತಾರೋ ಅದೇ ರೀತಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಮಹತ್ವ ಪಡೆದಿದ್ದಾರೆ. ಹೀಗಾಗಿ ಸ್ಥಳೀಯ ಪಾಲಿಕೆ ಸದಸ್ಯ ವೆಂಕಟಸ್ವಾಮಿ ನಾಯ್ಡು ಅಶ್ವಾರೂಢ ಕೆಂಪೇಗೌಡ ಪ್ರತಿಮೆ ಸ್ಥಾಪಿಸಿ ಕೆಂಪೇಗೌಡರ ಚರಿತ್ರೆ ಸಾರಿ ಹೇಳುವಂತೆ ಮಾಡಿದ್ದಾರೆಂದರು. ಇದೇ ವೇಳೆ 20 ಮಂದಿ ಸಮಾಜಸೇವಕರಿಗೆ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮೇಯರ್ ಡಿ.ವೆಂಕಟೇಶ್ಮೂರ್ತಿ, ಉಪ ಮೇಯರ್ ಎಲ್.ಶ್ರೀನಿವಾಸ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಸಾಹಿತಿ ವ್ಯಾಸರಾವ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.