ಬೆಂಗಳೂರು ನಗರ

ದಕ್ಷತೆ ಮೆರೆದ ಹಾಲು ಉತ್ಪಾದಕರ ಸಂಘ

Published On :

ಮಾಗಡಿ: ಕರ್ನಾಟಕದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ನರಸಿಂಹಮೂರ್ತಿ ನುಡಿದರು. ಅವರು ತಾಲೂಕಿನ ಸೋಲೂರು ಹಾಲು ಶಿಥಲೀಕೇಂದ್ರದ ಆವರಣದಲ್ಲಿ  ಜಿಲ್ಲಾ  ಸಹಕಾರಿ ಒಕ್ಕೂಟದ ಕಲ್ಯಾಣ ನಿಧಿ ಟ್ರಸ್ಚ್ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರ ಮಕ್ಕಳಿಗೆ ಏರ್ಪಡಿಸಿದ್ದಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ, ಪರಿಹಾರ ಚೆಕ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ ಸಹಕಾರಿ ಸಂಸ್ಥೆ ನಿಜಕ್ಕೂ ಪಾರದರ್ಶಕವಾಗಿದೆ. ಇಲ್ಲಿ ಯಾವುದೇ  ಲಂಚಾವತಾರವಿಲ್ಲ. ನಂಬಿಕೆ, ವಿಶ್ವಾಸದಿಂದ ನಡೆದುಕೊಂಡು ಬರುತ್ತಿರುವ ಹಾಲು ಉತ್ಪಾದರ ಸಹಕಾರ ಸಂಘಗಳು ರೈತರ ಪಾಲಿಗೆ ಕಾಮಧೇನು ಇದ್ದಂತೆ ಎಂದರು.  ಇದೇ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ, ಪರಿಹಾರದ ಚೆಕ್ಗಳನ್ನು ಒಕ್ಕೂಟದ ನಿರ್ದೇಶಕ ನರಸಿಂಹಮೂರ್ತಿ ವಿತರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.